ಉಡುಪಿಯ ನಾಲ್ವರ ಕೊಲೆ ಪ್ರಕರಣ ; ಸಂಜೆಯೊಳಗೆ ತನಿಖೆಯ ಸ್ಪಷ್ಟ ಚಿತ್ರಣ ಸಿಗಲಿದೆ - ಎಸ್ ಪಿ. ಡಾ. ಅರುಣ್
ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಹೇಳಿಕೆ ನೀಡಿದ್ದಾರೆ.
ಘಟನೆ ಕುರಿತು ಮಾತನಾಡಿದ ಅವರು ನಾಲ್ವರ ಹತ್ಯೆಗೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಚೌಗಲೆ ಯನ್ನು ವಶಕ್ಕೆ ಪಡೆಯಲಾಗಿದ್ದು ಇದರೊಂದಿಗೆ ಹಲವಾರು ಶಂಕಿತರ ವಿಚಾರಣೆಯನ್ನೂ ಮಾಡುತ್ತಿದ್ದೇವೆ ಎಂದು ಹೇಳಿದರು.
ಘಟನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.
Drought: ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಜಯಪುರ ಜಿಲ್ಲೆಯ ಬರ ಅಧ್ಯಯನ
ವಿಜಯಪುರ: ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಕೈಗಾರಿಕೆ ಖಾತೆ ಹೊಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಬುಧವಾರ ಅಧ್ಯಯನ ಪ್ರವಾಸ ಆರಂಭಿಸಿದ್ದಾರೆ.
ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಜೊತೆಗೂಡಿ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದರು.
ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆ 2 ರ ಕಾಲುವೆ ವೀಕ್ಷಣೆ ನಡೆಸಿದರು.
ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚುವರು, ಭೀಕರ ಬರಗಾಲ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೆರೆಗೆ ನೀರು ತುಂಬಿಸಲು ಆದ್ಯತೆ ನೀಡುವಂತೆ ಸೂಚಿಸಿದರು.