ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ನೇಮಕ..!

Twitter
Facebook
LinkedIn
WhatsApp
ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ನೇಮಕ..!

ಧಾನಸಭೆ ಚುನಾವಣೆ ನಡೆದು ಬರೋಬ್ಬರಿ ಆರು ತಿಂಗಳಿಗೂ ಹೆಚ್ಚು ಸಮಯ ಕಳೆದ ನಂತರ ಪ್ರತಿಪಕ್ಷ ಬಿಜೆಪಿ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡಿದೆ. ಒಕ್ಕಲಿಗ ಸಮುದಾಯದ ನಾಯಕ, ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್​ ಅಶೋಕ ಅವರಿಗೆ ಪ್ರತಿಪಕ್ಷ ನಾಯಕನ ಜವಾಬ್ದಾರಿ ವಹಿಸಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಶಾಸಕರನ್ನು ಉದ್ದೇಶಿಸಿ ಭಾಷಣದ ವೇಳೆ ವಿಪಕ್ಷ ನಾಯಕರ ವಿಚಾರವಾಗಿ ಹೈಕಮಾಂಡ್ ಸೂಚನೆಯನ್ನು ಸೂಚ್ಯವಾಗಿ ದುಶ್ಯಂತ್ ಕುಮಾರ್ ಗೌತಮ್ ಮತ್ತು ಬಿ.ಎಸ್‌. ಯಡಿಯೂರಪ್ಪ ಪ್ರಸ್ತಾಪಿಸಿದರು. ಅಶೋಕ್ ಹೆಸರು ಘೋಷಣೆಗೆ ಮಾಜಿ ಸಿಎ ಬಸವರಾಜ ಬೊಮ್ಮಾಯಿ ಸೂಚಿಸಿದರೆ, ಮಾಜಿ ಸಚಿವ ಸುನೀಲ್ ಕುಮಾರ್ ಅನುಮೋದನೆ ಮಾಡಿದರು.

 

ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಸ್ಫೋಟ

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರು ಪ್ರಮುಖರ ಜೊತೆ ಸಭೆ ನಡೆಸಿದ್ದರು. ವರಿಷ್ಠರ ನಿರ್ಧಾರ ಬಗ್ಗೆ ಆಕಾಂಕ್ಷಿಗಳ ಗಮನಕ್ಕೆ ತಂದಿದ್ದರು. ಇದೇ ವೇಳೆ ಆರ್​ ಅಶೋಕ್ ನೇಮಕ ಕುರಿತು ತಿಳಿಸಿದಾಗ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹೈಕಮಾಂಡ್ ತೀರ್ಮಾನ ಒಪ್ಪದೆ ಸಭೆಯಿಂದ ತೆರಳಿದ್ದಾರೆ. ಬಿಎಲ್​ಪಿ ಸಭೆ ಸಭೆಗೂ ಮುನ್ನವೇ ಹೊರನಡೆದಿದ್ದಾರೆ.

ಯಾರಿಗೂ ಬೇಸರವಾಗಿಲ್ಲ, ಸಭೆ ಬಹಿಷ್ಕರಿಸಿಲ್ಲವೆಂದ ಬೆಲ್ಲದ

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಅಸಮಾಧಾನ ಸ್ಫೋಟಗೊಂಡ ಬಗ್ಗೆ ಪ್ರತಿಕ್ರಿಯಸಿದ ಅರವಿದ ಬೆಲ್ಲದ, ಯಾರಿಗೂ ಬೇಸರ ಆಗಿಲ್ಲ, ಬಿಎಲ್​ಪಿ ಸಭೆ ಬಹಿಷ್ಕರಿಸಿಲ್ಲವೆಂದಿದ್ದಾರೆ,​​ ವೀಕ್ಷಕರು ಒನ್​ ಟು ಒನ್​ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದ ಶಾಸಕರೇ ಹೆಚ್ಚು ಇದ್ದಾರೆ ಎಂದು ಅವರು ಹೇಳಿದ್ದಾರೆ.

ಉಳಿದಂತೆ, ಶಾಸಕಾಂಗ ಪಕ್ಷದ ಸಭೆಗೆ ಬೆಂಗಳೂರಿನ ಯಶವಂತಪುರ ಕ್ಷೇತ್ರದ ಶಾಸಕ ಎಸ್​​ಟಿ ಸೋಮಶೇಖರ್ ಗೈರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist