ಶನಿವಾರ, ಜನವರಿ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

World cup 2027: ಮುಂದಿನ ವರ್ಲ್ಡ್ ಕಪ್ ಈ ದೇಶದಲ್ಲಿ ನಡೆಯಲಿದೆ ; ಯಾವಾಗ?

Twitter
Facebook
LinkedIn
WhatsApp
World cup 2027: ಮುಂದಿನ ವರ್ಲ್ಡ್ ಕಪ್ ಈ ದೇಶದಲ್ಲಿ ನಡೆಯಲಿದೆ ; ಯಾವಾಗ?

ಬೆಂಗಳೂರು: 13ನೇ ಆವೃತ್ತಿಯ ಆಕದಿನ ಕ್ರಿಕೆಟ್​ ವಿಶ್ವಕಪ್​ ಟೂರ್ನಿ ಮುಕ್ತಾಯ ಕಂಡಿದೆ. ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ ಕಪ್​ ಗೆದ್ದಿದೆ. ಇದೀಗ ಕ್ರಿಕೆಟ್​ ಅಭಿಮಾನಿಗಳಲ್ಲಿ ಮುಂದಿನ ವಿಶ್ವಕಪ್​ ಯಾವಾಗ, ಎಲ್ಲಿ ನಡೆಯಲಿದೆ ಎಂಬ ಚರ್ಚೆ ಶುರುವಾಗಿದೆ.

ಮುಂದಿನ ಐಸಿಸಿ ಏಕದಿನ ಕ್ರಿಕೆಟ್​ ವಿಶ್ವಕಪ್ ಟೂರ್ನಿ 2027ರಲ್ಲಿ ನಡೆಯಲಿದೆ. ಇದು 14ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಾಗಿದೆ. ಐಸಿಸಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದ ಜಂಟಿ ಆತಿಥ್ಯದಲ್ಲಿ ಈ ಟೂರ್ನಿ ನಡೆಯಲಿದೆ. ಒಟ್ಟು 14 ತಂಡಗಳು ಪಾಲ್ಗೊಳ್ಳಲಿವೆ. ಅಕ್ಟೋಬರ್​ ಮತ್ತು ನವೆಂಬರ್​ನಲ್ಲಿ ಟೂರ್ನಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ಸಹ-ಆತಿಥೇಯರಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಈ ತಂಡಗಳಿಗೆ ನೇರವಾಗಿ ಅರ್ಹತೆ ಸಿಗಲಿದೆ. ನಮೀಬಿಯಾ ಮೊದಲ ಬಾರಿಗೆ ಪಂದ್ಯಾವಳಿಯ ಆತಿಥ್ಯ ವಹಿಸಿದೆ. ಆದರೆ ಅವರು ಪೂರ್ಣ ಐಸಿಸಿ ಸದಸ್ಯರಲ್ಲದ ಕಾರಣ ಅವರಿಗೆ ನೇರ ಅರ್ಹತೆ ನೀಡಲಾಗಿಲ್ಲ. ಅರ್ಹತಾ ಸುತ್ತಿನ ಪಂದ್ಯವನ್ನು ಆಡಿ ಅರ್ಹತೆ ಗಳಿಸಬೇಕಿದೆ.

ತಂಡಗಳ ಸಂಖ್ಯೆ 14ಕ್ಕೇರಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಎಂಟು ಸ್ಥಾನ ಪಡೆಯುವ ತಂಡಗಳು ನೇರವಾಗಿ ಅರ್ಹತೆ ಪಡೆಯಲಿವೆ. ಉಳಿದ ನಾಲ್ಕು ಸ್ಥಾನಗಳನ್ನು ಕ್ವಾಲಿಫೈಯರ್ ಟೂರ್ನಿಗಳಲ್ಲಿ ಆಡಿ ಅರ್ಹತೆ ಪಡೆಯಬೇಕಿದೆ.

ಗುಂಪು ಹಂತದಲ್ಲಿ ಪಂದ್ಯ

2003ರ ಆವೃತ್ತಿಯ ವಿಶ್ವಕಪ್​ನಲ್ಲಿ ಆಡಿದಂತೆ 2027ರ ವಿಶ್ವಕಪ್ನಲ್ಲಿ ಎರಡು ಗುಂಪುಗಳು ಒಳಗೊಂಡಿದೆ. ಒಂದು ಗುಂಪಿಯಲ್ಲಿ ಏಳು ತಂಡಗಳಿರುತ್ತದೆ. ಪ್ರತಿ ಗುಂಪಿನಲ್ಲಿ ಅಗ್ರ ಮೂರು ತಂಡಗಳು ಸೂಪರ್ ಸಿಕ್ಸ್ ಸುತ್ತಿಗೆ ಪ್ರವೇಶಿಸುತ್ತವೆ. ನಂತರ ಅಂತಿಮ ವಿಜೇತರನ್ನು ನಿರ್ಧರಿಸಲು ಸೆಮಿಫೈನಲ್ ಮತ್ತು ಫೈನಲ್‌ಗಳು ನಡೆಯಲಿವೆ. ಗುಂಪು ಹಂತದಲ್ಲಿ, ಪ್ರತಿ ತಂಡವು ತನ್ನ ಗುಂಪಿನಲ್ಲಿರುವ ಇತರ ಎಲ್ಲ ತಂಡಗಳ ವಿರುದ್ಧ ಆಡಬೇಕು.

ಸೋಲು ಕಂಡ ಭಾರತ

ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.

ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist