ಪೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್ ಕಾರ್ಯನಿರ್ವಹಿಸುತ್ತಿಲ್ಲ ; ಕಾರಣ ಏನು?
ಕೊಪ್ಪಳ, ನ.23: ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ (Anganavadi Workers) ಮೊಬೈಲ್ ನೀಡಲಾಗಿತ್ತು. ಸದ್ಯ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಮೊಬೈಲ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಅವರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ 1,850 ಕಾರ್ಯಕರ್ತೆಯರು ಸೇರಿ ರಾಜ್ಯದ 65 ಸಾವಿರ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯಡಿ 2018-19 ರಲ್ಲಿ ಮೊಬೈಲ್ ನೀಡಲಾಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕಳೆದ ಮೂರು ತಿಂಗಳಿಂದ ರಿಚಾರ್ಜ್ ಮಾಡದ ಹಿನ್ನೆಲೆಯಲ್ಲಿ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ.
ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್ ಮೂಲಕ ಸರ್ಕಾರಕ್ಕೆ ಮಾಹಿತಿ ರವಾನಿಸಲು ಪರದಾಡುವಂತಾಗಿದೆ. ಅನೇಕರು ಅವರಿವರಿಂದ ವೈಪ್ ಪಡೆದು ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ತಮ್ಮದೇ ಇನ್ನೋಂದು ಸಿಮ್ಗೆ ಡೇಟಾ ಹಾಕಿಸಿಕೊಂಡು ವೈಪೈ ಪಡೆಯುತ್ತಿದ್ದಾರೆ.
ಮೊದಲೇ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದೇವೆ, ಇದೀಗ ಡೇಟಾ ರಿಚಾರ್ಜ್ ಹೊರೆ ಕೂಡಾ ಬೀಳುತ್ತಿದೆ ಎಂದು ಕಾರ್ಯಕರ್ತೆಯರು ಅಳಲುತೋಡಿಕೊಳ್ಳುತ್ತಿದ್ದಾರೆ. ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಮೊಬೈಲ್ ನೀಡಲಾಗಿತ್ತು. ಪ್ರತಿನಿತ್ಯ ಇದೇ ಮೊಬೈಲ್ ಮೂಲಕ ಕಾರ್ಯಕರ್ತೆಯರು ಇಲಾಖೆಗೆ ಮಾಹಿತಿ ರವಾನಿಸುತ್ತಿದ್ದರು.
ಇಲಾಖೆ ಅಧಿಕಾರಿಗಳು ರಿಚಾರ್ಜ್ ಮಾಡಿಸದೇ ಇದ್ದರೂ ಮಾಹಿತಿ ಕೇಳುವುದನ್ನು ಮಾತ್ರ ಬಿಟ್ಟಿಲ್ಲ. ಹೀಗಾಗಿ ಪ್ರತಿನಿತ್ಯ ಮಾಹಿತಿ ಅಪಲೋಡ್ ಮಾಡಲು ಅಂಗನವಾಡಿ ಕಾರ್ಯಕರ್ತೆಯರು ಹರಸಾಹಸ ಮಾಡುತ್ತಿದ್ದಾರೆ. ರೀಚಾರ್ಜ್ ಬಗ್ಗೆ ಕೇಳಿದರೆ ಕೇಂದ್ರ ಸರ್ಕಾರದ ಯೋಜನೆ, ಕೇಂದ್ರದಿಂದ ಹಣ ಬಂದಿಲ್ಲಾ ಅಂತ ರಾಜ್ಯ ಸರ್ಕಾರ ಹೇಳುತ್ತಿದೆ.
ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯಪೂರ್ವಕ ಮೊಟ್ಟೆ ತಿನ್ನಿಸಿದ ಶಿಕ್ಷಕ, ಕ್ರಮಕ್ಕೆ ಪೋಷಕರ ಆಗ್ರಹ
ಶಿವಮೊಗ್ಗ, (ನವೆಂಬರ್ 23): ಶಾಲೆಯಲ್ಲಿ ಶಿಕ್ಷಕನೋರ್ವ (Teacher) ಒತ್ತಾಯಪೂರ್ವಕವಾಗಿ ಬ್ರಾಹ್ಮಣ ವಿದ್ಯಾರ್ಥಿನಿಗೆ(Student) ಮೊಟ್ಟೆ(Egg) ತಿನ್ನಿಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ(School) ಈ ಘಟನೆ ಬೆಳಕಿಗೆ ಬಂದಿದೆ. ಅಮೃತ ಗ್ರಾಮದ ಶಾಲೆಯ ಶಿಕ್ಷಕರೊಬ್ಬರು ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ. ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಬಾಲಕಿ ತಂದೆ ಶ್ರೀಕಾಂತ್ ಆರೋಪಿಸಿದ್ದು, ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಾಸಕರು, ಜಿಲ್ಲಾ ಉಪ ನಿರ್ದೇಶಕರು, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ, ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.
Meals) ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ (Egg) ಅಥವಾ ಬಾಳೆ ಹಣ್ಣು (Banana) ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಿದೆ. ಇನ್ನು ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದು, ಕೆಲವರು ಮೊಟ್ಟೆ ಬದಲಿಗೆ ಬಾಳೆಹಣ್ಣು ನೀಡುವಂತೆ ಒತ್ತಾಯಿಸಿದ್ದರೆ, ಇನ್ನೂ ಕೆಲವರು ಪೌಷ್ಠಿಕಾಂಶದ ದೃಷ್ಟಿಯಿಂದ ಮಕ್ಕಳಿಗೆ ಮೊಟ್ಟೆಯನ್ನೇ ವಿತರಿಸಬೇಕೆಂದು ಆಗ್ರಹಿಸಿದ್ದರು.
ಈ ಹಿನ್ನೆಲೆ ಸರ್ಕಾರ ಮೊಟ್ಟೆ ಹಾಗೂ ಬಾಳೆಹಣ್ಣು ಎರಡನ್ನೂ ವಿತರಿಸಲು ಆದೇಶಿಸಿದ್ದು, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುವಂತೆ ಆದೇಶದಲ್ಲಿ ಸೂಚಿಸಿತ್ತು. ಆದ್ರೆ, ಶಿವಮೊಗ್ಗದಲ್ಲಿ ಶಿಕ್ಷಕ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಮಾತ್ರ ಭಾರೀ ಚರ್ಚೆಗೆ ಗ್ರಾಸವಾಗಿದೆ.