ಕಟೀಲು ದೇವಿಯ ಮುಂದೆ ನಾನು ಪ್ರಮಾಣ ಮಾಡಿ ಹೇಳುತ್ತೇನೆ, ರಾಜಕೀಯದಲ್ಲಿ ಇದುವರೆಗೂ ನಾನು ಯಾರ ಬಳಿಯೂ ಒಂದು ರೂಪಾಯಿ ಮುಟ್ಟಿಲ್ಲ ; ನಳೀನ್ ಕುಮಾರ್ ಕಟೀಲ್
ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.
ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಈ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷರಾಗಿ ಅಭೂತಪೂರ್ವ ಸೇವೆ ಸಲ್ಲಿಸಿದ್ದ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ಗೆ ಬುಧವಾರ ಬಂಟ್ವಾಳದಲ್ಲಿ ಆಭಿನಂದನಾ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಹಲವಾರು ಬಾರಿ ಸಾಮಾಜಿಕ ಜಾಲತಾಣ, ವೇದಿಕೆಗಳಲ್ಲಿ, ಕಾರ್ಯಕರ್ತರ ಸಭೆಗಳಲ್ಲಿ ಆದ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಕಟೀಲ್ ಪ್ರತಿಕ್ರೀಯಿಸಿದ್ದು,ನನ್ನ ವಿರುದ್ದದ ಹಲವು ಟೀಕೆ ,ಟಿಪ್ಪಣಿಯನ್ನ ಕೇಳಿದ್ದೇನೆ, ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ,ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ಮತ್ತು ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಕಳೆದ ಸಮಯದಲ್ಲಿ ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ ಮತ್ತು ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ ಆದ್ರೆ ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲಎಂಬ ಕಾರಣಕ್ಕೆ ನನಗೂ ದುಃಖವಿದೆ.
ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ ಹೊರತುನೀವು ತಲೆ ತಗ್ಗಿಸುವ ರೀತಿಯ ಯಾವುದೇ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ ಮತ್ತು ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಹೇಳುವಾಗ ಭಾವುಕರಾಗಿ ದುಃಖ ಉಮ್ಮಳಿಸಿ ಬಂದು ಗದ್ಗದೀತರಾದ್ರು.
ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ..!
ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ವಿಮಾನದೊಳಗೆ ಅಭಿನಂದಿಸಿ ಗೌರವಿಸಿದೆ.
ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿರುವುದನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು” ಎಂದರು. ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.