ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತಿಮಾ ಬೀವಿ ನಿಧನ!

Twitter
Facebook
LinkedIn
WhatsApp
ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತಿಮಾ ಬೀವಿ ನಿಧನ!

ತಿರುವನಂತಪುರಂ: ಸುಪ್ರೀಂ ಕೋರ್ಟ್‍ನ (Supreme Court) ಮೊದಲ ಮಹಿಳಾ ನ್ಯಾಯಾಧೀಶೆ (Woman Judge) ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲೆ ಫಾತಿಮಾ ಬೀವಿ (96) (Fathima Beevi) ಅವರು ಕೆರಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೇರಳದ ಪಂದಳಂನಲ್ಲಿ ಜನಿಸಿದ ಅವರು, ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಬಳಿಕ 1950 ರಲ್ಲಿ ಕೇರಳದ ಕೆಳ ನ್ಯಾಯಾಂಗದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಕೇರಳದ ಅಧೀನ ನ್ಯಾಯಾಂಗ ಸೇವೆಗಳಲ್ಲಿ ಮುನ್ಸಿಫ್ ಆಗಿ ಸೇವೆ ಸಲ್ಲಿಸಿದರು. ಬಳಿಕ ಅಧೀನ ನ್ಯಾಯಾಧೀಶರಾಗಿ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿ ಕೂಡ ಅವರು ಸೇವೆ ಸಲ್ಲಿಸಿದ್ದರು.

ಬೀವಿ ಅವರು 1983 ರಲ್ಲಿ ಹೈಕೋರ್ಟ್ (High Court) ನ್ಯಾಯಾಧೀಶರಾದರು. ಬಳಿಕ 1989 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದರು. ಇವರು ಉನ್ನತ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ನ್ಯಾಯಾಧೀಶೆ ಕೂಡ ಹೌದು.

ನಿವೃತ್ತಿಯ ನಂತರ ನ್ಯಾಯಮೂರ್ತಿ ಬೀವಿಯವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ನಂತರ ಅವರನ್ನು ತಮಿಳುನಾಡಿನ ರಾಜ್ಯಪಾಲರಾಗಿ ನೇಮಿಸಲಾಯಿತು. ಅವರು ರಾಜ್ಯದ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ತಮಿಳುನಾಡು ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಸೇವೆ ಸಲ್ಲಿಸಿದ್ದರು.

ಅವರಿಗೆ ಭಾರತ್ ಜ್ಯೋತಿ ಪ್ರಶಸ್ತಿ ಮತ್ತು ಯುಎಸ್-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist