ಇಂಡೋನೇಷಿಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ!
Twitter
Facebook
LinkedIn
WhatsApp
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.
ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೇಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.