ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

SSLC ಮತ್ತು ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಅಪ್ಡೇಟ್ಸ್

Twitter
Facebook
LinkedIn
WhatsApp
SSLC ಮತ್ತು ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಅಪ್ಡೇಟ್ಸ್

ಬೆಂಗಳೂರು, ಡಿ.01: ದ್ವಿತೀಯ ಪಿಯುಸಿ(PUC) ಹಾಗೂ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. 2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.

ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24 ನೇ ಸಾಲಿನ ವಾರ್ಷಿಕ ಪರೀಕ್ಷೆ -1ರ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.

ದ್ವಿತೀಯ ಪಿಯುಸಿ

* ಮಾರ್ಚ್ 2- ಕನ್ನಡ, ಅರೇಬಿಕ್

* ಮಾರ್ಚ್ 4- ಇತಿಹಾಸ, ಭೌತಶಾಸ್ತ್ರ

* ಮಾರ್ಚ್ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್

* ಮಾರ್ಚ್ 6- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

* ಮಾರ್ಚ್ 7- ಹಿಂದಿ

* ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

* ಮಾರ್ಚ್ 11- ಇಂಗ್ಲಿಷ್

* ಮಾರ್ಚ್ 12- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

* ಮಾರ್ಚ್ 13- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

* ಮಾರ್ಚ್ 14- ಗಣಿತ, ಶಿಕ್ಷಣಶಾಸ್ತ್ರ

* ಮಾರ್ಚ್ 16- ಭೂಗೋಳಶಾಸ್ತ್ರ, ಜೀವಶಾಸ್ತ್ರ

* ಮಾರ್ಚ್ 18- ರಸಾಯನಶಾಸ್ತ್ರ, ಮನಃಶಾಸ್ತ್ರ,ಮೂಲಗಣಿತ, ಹಿಂದೂಸ್ಥಾನಿ ಸಂಗೀತ

* ಮಾರ್ಚ್ 20- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

* ಮಾರ್ಚ್ 22- ಅರ್ಥಶಾಸ್ತ್ರ

ಎಸ್‍ಎಸ್‍ಎಲ್‍ಸಿ

* ಮಾರ್ಚ್ 25- ಪ್ರಥಮ ಭಾಷೆ (ಕನ್ನಡ)

* ಮಾರ್ಚ್ 27- ಸಮಾಜ ವಿಜ್ಞಾನ

* ಮಾರ್ಚ್ 30- ವಿಜ್ಞಾನ

* ಏಪ್ರಿಲ್ 2- ಗಣಿತ

* ಏಪ್ರಿಲ್ 4- ತೃತೀಯ ಭಾಷೆ (ಹಿಂದಿ)

* ಏಪ್ರಿಲ್ 6- ದ್ವೀತಿಯ ಭಾಷೆ (ಇಂಗ್ಲಿಷ್)

Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ

ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಹಿನ್ನೆಲೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜಕೀಯ ನಾಯಕರೂ ಫುಲ್ ಅಲರ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದೇವಸ್ಥಾನಗಳಿಗೂ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ (Private School) ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ. 

ಈ ಪ್ರಕರಣವನ್ನು ನಮ್ಮ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ (Government) ಬದ್ಧವಾಗಿದೆ. ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

35 ಶಾಲೆಗಳ ಇ-ಮೇಲ್‌ ಪರಿಶೀಲನೆ:
ಪೊಲೀಸರ ತನಿಖೆ (Police Investigation) ವೇಳೆ 15 ಅಲ್ಲ ಒಟ್ಟು 35 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದುರುವುದು ಕಂಡುಬಂದಿದೆ. ʻಪಬ್ಲಿಕ್‌ ಟಿವಿʼ ವರದಿ ನೋಡಿ ಎಚ್ಚೆತ್ತ ಅಧಿಕಾರಿಗಳು ಶಾಲೆಗಳಲ್ಲಿ ಮೇಲ್‌ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಶಾಲೆಗಳ ಇಂಚಿಂಚೂ ಆವರಣಗಳನ್ನು ತಪಾಸಣೆ ನಡೆಸುಲಾಗುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist