ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ ; ಪಿಎಸ್ಐ ಸೇರಿ 6 ಮಂದಿ ಸಿಬ್ಬಂದಿ ಅಮಾನತು - ದೂರು ದಾಖಲಿಸಿಕೊಂಡ ಕೋರ್ಟ್!

Twitter
Facebook
LinkedIn
WhatsApp
ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ ; ಪಿಎಸ್ಐ ಸೇರಿ 6 ಮಂದಿ ಸಿಬ್ಬಂದಿ ಅಮಾನತು - ದೂರು ದಾಖಲಿಸಿಕೊಂಡ ಕೋರ್ಟ್!

ಚಿಕ್ಕಮಗಳೂರು, (ಡಿಸೆಂಬರ್ 01): ಹೆಲ್ಮೆಟ್ ಹಾಕದ ಕಾರಣಕ್ಕೆ ಚಿಕ್ಕಮಗಳೂರಿನಲ್ಲಿ (Chikkamagaluru) ವಕೀಲ ಪ್ರೀತಮ್ ಎನ್ನುವರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ. ಹೆಲ್ಮೆಟ್ ಹಾಕದ ಕಾರಣಕ್ಕೆ ಅಮಾನುಷ ಹಲ್ಲೆ‌ ಆಘಾತಕಾರಿ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್. ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಕೀಲರಿಗೇ ಹೀಗಾದರೆ ಜನಸಾಮಾನ್ಯರ ಕಥೆ ಏನು? ಹೆಲ್ಮೆಟ್ ಹಾಕದ‌ ಕಾರಣಕ್ಕೆ ಹೀಗೆ ಹಲ್ಲೆ‌ ನಡೆಸಬಹುದೇ? ಎಂದು ಪ್ರಶ್ನಿಸಿದ ಹೈಕೋರ್ಟ್​, ಈ ಪ್ರಕರಣದ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಹಲ್ಲೆ ಕಾರಣಕ್ಕೆ ಕೋರ್ಟ್ ಬಹಿಷ್ಕರಿಸದಂತೆ ವಕೀಲರಿಗೂ ಹೈಕೋರ್ಟ್​ ಮನವಿ ಮಾಡಿದ್ದು, ವಕೀಲರು ಟ್ರೇಡ್ ಯೂನಿಯನ್ ರೀತಿ ಕೋರ್ಟ್ ಬಹಿಷ್ಕರಿಸಬಾರದು. ಕಾನೂನು ರೀತ್ಯಾ ಕ್ರಮಕ್ಕೆ‌ ಮುಂದಾಗುವಂತೆ ಹೈಕೋರ್ಟ್ ಸೂಚಿಸಿದೆ. ಇನ್ನು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪ್ರಕರಣದ ಹಿನ್ನಲೆ

ಹೆಲ್ಮೆಟ್ ವಿಚಾರವಾಗಿ ವಕೀಲ ಪ್ರೀತಮ್ ಎನ್ನುವರನ್ನು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ​ ಹಲ್ಲೆ ನಡೆಸಲಾಗಿತ್ತು. ವಕೀಲ ಪ್ರೀತಮ್​​ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಠಾಣೆ ಮುಂದೆ ವಕೀಲರು ಪ್ರತಿಭಟನೆ ಮಾಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಎಸ್​ಪಿ ವಿಕ್ರಂ ಅಮ್ಟೆ ಭೇಟಿ ನೀಡಿ ಈ ಬಗ್ಗೆ ವಿಚಾರಣೆ ನಡೆಸಿದ್ದರು. ಬಳಿಕ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪಿಎಸ್​ಐ ಮಹೇಶ್ ಪೂಜಾರಿ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಿದ್ದರು.

ಆದ್ರೆ, ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕೆಂದು ವಕೀಲರು ಪಟ್ಟು ಹಿಡಿದಿದ್ದರು. ಪ್ರೀತಮ್ ಬೆಂಬಲಕ್ಕೆ ನಿಂತ ರಾಜ್ಯ ಬಾರ್ ಕೌನ್ಸಿಲ್, ರಾಜ್ಯಾದ್ಯಂತ ಕೋರ್ಟ್ ಕಲಾಪಗಳನ್ನ ಬಹಿಷ್ಕರಿಸಲು ನಿರ್ಧಾರಿಸಿತ್ತು. ಅಲ್ಲದೇ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾಟ ಮಂತ್ರಗಳ‌ ಕಾಟ! ಭಯಭೀತರಾದ ವಾಹನ ಸವಾರರು

ರಾಮನಗರ, ಡಿ.01: ಬೆಂಗಳೂರು -ಮೈಸೂರು ಹೆದ್ದಾರಿ (Bengaluru Mysuru highway) ಯಲ್ಲಿ ಪ್ರೇತಾತ್ಮಗಳ ಭಯಕ್ಕೆ ವಾಹನ ಸವಾರರು ಕಂಗಾಲಾಗಿದ್ದಾರೆ. ರಾಮನಗರ(Ramanagara) ಸಮೀಪ ಹೆದ್ದಾರಿ ಬಳಿ ಮಾಟ ಮಂತ್ರ(Mata Mantra) ಗಳ‌ ಕಾಟ ಹೆಚ್ಚಾಗಿದ್ದು, ಮಣ್ಣಿನಿಂದ‌ ಮಾಡಿರುವ ಮೂರ್ತಿಗಳು ಗ್ರಾಮಸ್ಥರನ್ನು ಭಯವಾಗುವಂತೆ ಮಾಡಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ಕೂಡಲೇ ಬ್ರೇಕ್​ ಹಾಕಬೇಕಾಗಿದೆ.

ಈ ಆತಂಕ‌ ಮೂಡಿಸಿರುವ ಮೂರ್ತಿಗಳಲ್ಲಿ ಒಂದು ಗಂಡು ಹಾಗೂ ಇನ್ನೊಂದು ಹೆಣ್ಣು ಮೂರ್ತಿ ಇದೆ. ಅದಕ್ಕೆ ಕುಂಕುಮ,‌ ಅರಿಶಿಣ,‌ ಬಳೆ ಹಾಗೂ ಕೊರಳಲಿ ವಿಚಿತ್ರವಾದ ದಾರವನ್ನು ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಮೂರ್ತಿಗಳು ವಿಚಿತ್ರ ಹಾಗೂ ಭಯ ಮೂಡುವಂತಿದೆ. ಅದರ ಕಣ್ಣುಗಳು ನೋಡಿ ಸವಾರರು ಭಯಭೀತರಾಗಿದ್ದು, ಕೂಡಲೇ ಮೂರ್ತಿಗಳನ್ನು ತೆರವು ಮಾಡಿ, ಶುದ್ಧಿಕರಣಗೊಳಿಸಿ ಲೈಟ್ ಹಾಕುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ.

ಮಾಟ-ಮಂತ್ರ ಎಂದರೇನು?

ಈ ಮಾಟ – ಮಂತ್ರ (ಮಂತ್ರವಿದ್ಯೆ) ಎನ್ನುವುದು ಒಂದು ವಿಶಿಷ್ಟ ಬಗೆಯ ಮಾಂತ್ರಿಕ ಶಕ್ತಿಯನ್ನು ಉಪಯೋಗಿಸಿಕೊಂಡು ಜನರನ್ನು ಹಿಂಸಿಸುವ ಅಥವಾ ಅವರ ಆಸ್ತಿಪಾಸ್ತಿಯನ್ನು ಹಾನಿಗೊಳಿಸುವ, ಪ್ರಪಂಚದಾದ್ಯಂತ ಕಂಡುಬರುವ, ಎಲ್ಲ ಆದಿವಾಸಿಗಳಲ್ಲಿಯೂ ಇರುವ ಒಂದು ಸಂಪ್ರದಾಯ ಮತ್ತು ನಂಬಿಕೆ(ವಾಮಾಚಾರ). ಇದು ಧರ್ಮದಷ್ಟೇ ಪ್ರಾಚೀನವಾದುದು. ಒಂದು ಕಾಲಕ್ಕೆ ಧರ್ಮಕ್ಕೂ, ಮಾಟ-ಮಂತ್ರಗಳಿಗೂ ಸಂಬಂಧವೇ ಇಲ್ಲ ಎಂದು ಭಾವಿಸಲಾಗಿತ್ತು. ಅನಂತರ ಅವೆರಡೂ ಅವಿಭಾಜ್ಯ ಅಂಗಗಳು ಎನ್ನುವಷ್ಟರ ಮಟ್ಟಿಗೆ ಅವುಗಳ ಸಂಬಂಧವನ್ನು ಕಂಡುಕೊಳ್ಳಲಾಯಿತು. ಫ್ರೇಜರನ ಪ್ರಕಾರ ದೇವತಾರಾಧೆನೆಯ ಮುಂದಿನ ಘಟ್ಟವೇ ಮಾಟ-ಮಂತ್ರ ಮುಂತಾದವು. ಮಂತ್ರ ವಿದ್ಯೆಯನ್ನು ಆತ ಪ್ರಾಚೀನ ವಿಜ್ಞಾನ ಎಂದೇ ಕರೆದಿದ್ದಾನೆ. ಧರ್ಮಕ್ಕೂ ಮಂತ್ರವಿದ್ಯೆಗೂ ಸಂಬಂಧವಿರುವಂತೆಯೇ ಮಂತ್ರವಿದ್ಯೆಗೂ ವಿಜ್ಞಾನಕ್ಕೂ ಹಲವಂಶಗಳಲ್ಲಿ ಸಂಬಂಧವಿದೆ ಎಂಬುದನ್ನು ಗುರುತಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist