ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪ್ಪ ಮಗ ಸೇರಿ ಒಂದು ನಾಟಕ ಕಂಪನಿ ನಡೆಸುತ್ತಿದ್ದಾರೆ; ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್!

Twitter
Facebook
LinkedIn
WhatsApp
ಅಪ್ಪ ಮಗ ಸೇರಿ ಒಂದು ನಾಟಕ ಕಂಪನಿ ನಡೆಸುತ್ತಿದ್ದಾರೆ; ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್!

ವಿಜಯಪುರ: ಸ್ಥಳೀಯ ಶಾಸಕ ಮತ್ತು ಬಿಎಸ್ ಯಡಿಯೂರಪ್ಪ (BS Yediyurappa) ಕುಟುಂಬ ಬದ್ಧವೈರಿಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಮಾಜಿ ಮುಖ್ಯಮಂತ್ರಿ ಮತ್ತು ಅವರ ಮಗ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 

ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತಾಡಿದ ಅವರು ಅಪ್ಪ ಮಗ ಸೇರಿ ಒಂದು ನಾಟಕ ಕಂಪನಿ ನಡೆಸುತ್ತಿದ್ದಾರೆ, ನಾಟಕ ಮಾಡೋದು ಬೇಡ ಅಂತ ಹಿಂದೆ ಹೇಳಿದಂತೆ ಈಗಲೂ ಹೇಳುವುದಾಗಿ ಯತ್ನಾಳ್ ಹೇಳಿದರು. ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಅಂತ ಹೇಳಿಕೊಳ್ಳಲು ಹೇಸಿಗೆ ಅನಿಸುತ್ತದಂತೆ, ಹಾಗಾಗೇ, ನಿಕಟಪೂರ್ವ ಮುಖ್ಯಮಂತ್ರಿ ಅಂತ ಹೇಳಿಸಿಕೊಳ್ಳುತ್ತಾರೆ.

ಮಾಜಿ ಮುಖ್ಯಮಂತ್ರಿ ಬದಲು ನಿಕಟಪೂರ್ವ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ರಾಜ್ಯದ ಮಾಜಿ ಮುಖ್ಯಮಂತ್ರಿಗಳಲ್ಲಿ ಯಡಿಯೂರಪ್ಪನವರೇ ಮೊದಲಿಗರು ಮತ್ತು ಕೊನೆಯವರು ಎಂದು ಯತ್ನಾಳ್ ಗೇಲಿ ಮಾಡಿದರು. ಮುಖ್ಯಮಂತ್ರಿ ಕುರ್ಚಿಯ ಮೇಲೆ ಅವರಿಗರು ವ್ಯಾಮೋಹಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಶಾಸಕ ಹೇಳಿದರು.

ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕೈ ಶಾಸಕರಿಂದಲೇ ಮನವಿ; ರಾಹುಲ್ ಗಾಂಧಿ, ಸಿಎಂಗೆ ಪತ್ರ

ಕಲಬುರಗಿ, ಡಿ.02: ಪರೀಕ್ಷೆ ವೇಳೆ ಅಕ್ರಮ ನಡೆದ (PSI Recruitment Scam) ಹಿನ್ನೆಲೆ ರದ್ದಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 23ರಂದು ಮರುಪರೀಕ್ಷೆ (PSI Re-examination) ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಆದರೆ ಇತ್ತ ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕಾಂಗ್ರೆಸ್ ಶಾಸಕರಿಂದಲೇ ಮನವಿ ಕೇಳಿ ಬರುತ್ತಿದೆ. ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ 2021ರ ಅಕ್ಟೋಬರ್ 3ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ಕಂಡುಬಂದಿತ್ತು. ಈ ಕಾರಣಕ್ಕೆ ಪರೀಕ್ಷೆ ರದ್ದಾಗಿತ್ತು. ಸದ್ಯ ಈಗ ಡಿಸೆಂಬರ್ 23ರಂದು ಮರುಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಬೆಂಗಳೂರು ನಗರದಲ್ಲಿ ಮಾತ್ರ ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆ ನಡೆಸಲು ತಿಳಿಸಿದೆ. ಆದರೆ ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಕೇವಲ 20 ದಿನದಲ್ಲಿ ಓದಿ ಪಿಎಸ್‌ಐ ಪರೀಕ್ಷೆ ಎದುರಿಸುವುದು ಕಷ್ಟದ‌ ಕೆಲಸ. ಪರೀಕ್ಷೆ ಎದುರಿಸಲು ಕನಿಷ್ಠ 3 ತಿಂಗಳಾದರೂ ಬೇಕು. ಹೀಗಾಗಿ ಮರುಪರೀಕ್ಷೆ ದಿನಾಂಕವನ್ನ ಮುಂದೂಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಸಿಎಂಗೆ ಪತ್ರ‌ ಬರೆದು ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರುಪರೀಕ್ಷೆ ದಿನಾಂಕ ಮುಂದೂಡಲು ಮನವಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನಲೆಯಲ್ಲಿ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿತ್ತು. ರಾಜ್ಯಾದ್ಯಂತ 55 ಸಾವಿರ ಅಭ್ಯರ್ಥಿಗಳು ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿದ್ದಾರೆ.

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ಕೇಸ್ ದಾಖಲಾಗಿದ್ದವು. ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪಾಲಕರನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist