ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರು ಮತ್ತು ಟಾಟಾ ಏಸ್ ನಡುವೆ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ!

Twitter
Facebook
LinkedIn
WhatsApp
ಕಾರು ಮತ್ತು ಟಾಟಾ ಏಸ್ ನಡುವೆ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ!

ಚಿಕ್ಕಬಳ್ಳಾಪುರ: ಕಾರು (Car) ಮತ್ತು ಟಾಟಾ ಏಸ್‌ನ (Tata Ace) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ (Bengaluru) ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುವಿಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ 112 ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟಾಟಾ ಏಸ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಮಾಹಿತಿಯನ್ನು ಪೋಲೀಸರು ಕಲೆ ಹಾಕುತ್ತಿದ್ದಾರೆ.

ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್‌ – ಚಿನ್ನಾಭರಣ ಬೆಂಕಿಗಾಹುತಿ

ಕೊಪ್ಪಳ: ಇಲ್ಲಿನ ಗಂಗಾವತಿ ನಗರದ (Gangavathi City) ಗಣೇಶ ವೃತ್ತದಲ್ಲಿ ಕೆಜೆಪಿ ಜ್ಯುವೆಲ್ಲರಿ ಮಳಿಗೆಯಲ್ಲಿ (Jewellery Shops) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ ಆಗಿದೆ.‌

ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಘಟನೆ ನಡೆದಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.‌ ಸ್ಥಳಕ್ಕೆ 4 ಅಗ್ನಿಶಾಮಕ ವಾಹನ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ನಡೆಸಿವೆ.

ಒಟ್ಟು 3 ಮಹಡಿಯ ಕೆಜೆಪಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿವೆ ಇವೆ. ಎಲ್ಲ ಕಡೆ ಬೆಂಕಿ ಹೊತ್ತಿಕೊಂಡಿದೆ. ಸತತ 6 ಗಂಟೆ ಕಾರ್ಯಾಚರಣೆ ನಂತರ ಬೆಂಕಿ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಪಾರ ಪ್ರಮಾಣದ ಚಿನ್ನಾಭರಣ ಬೆಂಕಿಗೆ ಆಹುತಿ ಆಗಿರುವ ಶಂಕೆ ವ್ಯಕ್ತವಾಗಿದೆ.

ಗಂಗಾವತಿ ನಗರ ಠಾಣೆಯಲ್ಲಿ (Gangavathi City Police) ಪ್ರಕರಣ ದಾಖಲಾಗಿದೆ‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist