ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ, ಡಿ.02: ಮಕ್ಕಳಾಗಿಲ್ಲವೆಂದು ಮನನೊಂದುನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನಡೆದಿದೆ. ಸವಿತಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 12 ವರ್ಷದ ಹಿಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರೆಗೂಡು ಗ್ರಾಮದ ರವಿಕುಮಾರ್ ಎಂಬುವವರ ಜೊತೆ ಮದುವೆಯಾಗಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೆಲಮಂಗಲದಲ್ಲಿ ದಂಪತಿ ವಾಸವಿದ್ದರು.
ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣು
ಇನ್ನು 12 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕೊರಗು ಹೊಂದಿದ್ದ ಗೃಹಿಣಿ ಸವಿತಾ, ಪತಿ ಬಳಿ ಮಕ್ಕಳಿಲ್ಲದ ವಿಷಯ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದ ಅವರು, ಇಂದು(ಡಿ.02) ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಬಾರಿ ಪತ್ನಿಗೆ ಪೋನ್ ಮಾಡಿದರೂ ಕರೆ ಸ್ವೀಕರಿಸದ ಹಿನ್ನಲೆ ಮನೆ ಬಳಿ ಬಂದು ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ
ಬೆಂಗಳೂರು: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ (Abort) ಮಾಡುತ್ತಿದ್ದೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ (Nurse) ಆಗಿದ್ದ ಮಂಜುಳಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.
ಮೈಸೂರು (Mysuru) ಭ್ರೂಣ ಹತ್ಯೆ (Foeticide) ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಗಳನ್ನು ಇಂಚಿಚಾಗಿ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ.
ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಮಂಜುಳಾ, ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಅಬಾರ್ಷನ್ ಮಾಡಿದ್ದೇನೆ ಎಂದಿದ್ದಾಳೆ.
ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ. ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಮೆಷಿನ್ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರೋದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಅಬಾರ್ಷನ್ ಮಾಡಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾಳೆ.
6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರಿಗೆ ನೀಡಿದ್ದಾಳೆ.
ಇನ್ನು ಡಾಕ್ಟರ್ ಚಂದನ್ ಬಲ್ಲಾಳ್ ಪುರಾಣವನ್ನು ಪೊಲೀಸರು ಬಿಚ್ಚಿಟ್ಟಿದ್ದು, ಅಸಲಿಗೆ ಚಂದನ್ ಬಲ್ಲಾಳ್ ಎಂಬಿಬಿಎಸ್ ಡಾಕ್ಟರ್ ಅಲ್ಲವೇ ಅಲ್ಲ. ಅವನು ಸ್ಕ್ಯಾನಿಂಗ್ ಮಾಡೋ ಪಾಠವನ್ನೇ ಕಲಿತಿರಲಿಲ್ಲ. ಚಂದನ್ ಬಲ್ಲಾಳ್ ಬಿಎಎಂಎಸ್ ಓದಿರುವ ಡಾಕ್ಟರ್. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯೋದಕ್ಕೂ ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ ಎಂದು ಹೇಳಿದ್ದಾರೆ.