ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗೆ ಎರಡು ದಿನಗಳ ಜಾಮೀನು ಮಂಜೂರು
ಸುಳ್ಯ: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗೆ ಎರಡು ದಿನಗಳ ಜಾಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ನನ್ನು 15ನೇ ಆರೋಪಿಯಾಗಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಸುಳ್ಯದಲ್ಲಿ ಈತನ ತಂಗಿಯ ಮದುವೆ ಇರುವ ಹಿನ್ನೆಲೆಯಲ್ಲಿ ಎರಡು ದಿನಗಳ ಜಾಮೀನು ದೊರೆತಿದೆ ಎಂದು ತಿಳಿದು ಬಂದಿದೆ.
ಪ್ರಸ್ತುತ ಈತ ಮೈಸೂರಿನ ಜೈಲಿನಲ್ಲಿದ್ದು ಜಾಮೀನು ಅವಧಿ ಮುಗಿದ ಬಳಿಕ ಮತ್ತೆ ಜೈಲು ಸೇರಬೇಕಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ತನ್ನ ಚಿಕನ್ ಶಾಪ್ ಎದುರೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರ್ ಮೇಲೆ ಎರಗಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಹಲವರನ್ನು ಬಂಧಿಸಿತ್ತು. ಈಗಲೂ ಕೆಲವು ಆರೋಪಿಗಳಿಗಾಗಿ ಎನ್ ಐಎ ಶೋಧ ನಡೆಸುತ್ತಿದೆ.
ಪುತ್ತೂರು: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ
ಪುತ್ತೂರು: ಕಬಕ ಸಮೀಪದ ಕೂವೆತ್ತಿಲ್ಲ ಎಂಬಲ್ಲಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾರಿನ ಡೋರ್ ಮುರಿದು ಗಾಯಾಳುಗಳನ್ನು ರಕ್ಷಿಸಲಾಯಿತು. ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು. ಇಂಡಿಕಾ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.