ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!
ಮುಂಬೈ ಡಿಸೆಂಬರ್ 05: ಖ್ಯಾತ ಹಿಂದಿ ಧಾರವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಸೆಂಬರ್ 1 ರಂದು ದಿನೇಶ್ ಅವರಿಗೆ ಹೃದಯಾಘಾತವಾಗಿತ್ತು, ಈ ಹಿನ್ನಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ ಅವರು ಖಚಿತ ಪಡಿಸಿದ್ದಾರೆ.
ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಸಿಐಡಿಯಲ್ಲಿ ದಯಾ ಪಾತ್ರವನ್ನು ನಿರ್ವಹಿಸುತ್ತಿದ್ದ ದಯಾನಂದ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಹಲವಾರು ಟಿವಿ ಕಾರ್ಯಕ್ರಮದಲ್ಲಿ ದಿನೇಶ್ ಭಾಗಿಯಾಗಿದ್ದರೂ, ಹತ್ತಾರು ಧಾರಾವಾಹಿಗಳಲ್ಲಿ ನಟಿಸಿದ್ದರೂ, ಸಿಐಡಿ ಧಾರಾವಾಹಿ ಇವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ಈ ಧಾರಾವಾಹಿಯಲ್ಲಿ ಅವರು ಫ್ರೆಡೆರಿಕ್ಸ್ ಪಾತ್ರವನ್ನು ನಿರ್ವಹಿಸುತ್ತಿದ್ದರು. 20 ವರ್ಷಗಳ ಕಾಲ ಅವರು ಈ ತಂಡದೊಂದಿಗೆ ಸಕ್ರೀಯರಾಗಿದ್ದರು.
ಚಿಕ್ಕಮಗಳೂರು ವಕೀಲರ ಮೇಲೆ ದಾಖಲಾದ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್
ಬೆಂಗಳೂರು ಡಿಸೆಂಬರ್ 05: ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಲಾಯರ್ v/s ಪೊಲೀಸ್ ನಡುವಿನ ಘರ್ಷಣೆ ಸಿಐಡಿ ರಾಜ್ಯ ಸರಕಾರ ವಹಿಸಿದೆ. ಈ ನಡುವೆ ಕೆಲವು ವಕೀಲರ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ವಕೀಲರಾದ ಡಿ ಬಿ ಸುಜೇಂದ್ರ, ಎ ಕೆ ಭುವನೇಶ್, ಕೆ ಬಿ ನಂದೀಶ್ ಮತ್ತು ಎಚ್ ಎಂ ಸುಧಾಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.
ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿರುವ ವಕೀಲ ಎನ್ ಟಿ ಪ್ರೀತಮ್ ಅವರ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಈ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಎಫ್ಐಆರ್ಗೆ ತಡೆ ನೀಡಿದೆ.