ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಸಂಶೋಧಕ ಡಾ| ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ವಿಶೇಷ ಕೋರ್ಟ್‌!

Twitter
Facebook
LinkedIn
WhatsApp
ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಸಂಶೋಧಕ ಡಾ| ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ವಿಶೇಷ ಕೋರ್ಟ್‌!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಸಂಶೋಧಕ ಡಾ| ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಲು ವಿಶೇಷ ನ್ಯಾಯಾಲಯ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಅದಕ್ಕೆ ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಕಲಬುರ್ಗಿ ಅವರ ಪತ್ನಿ ಉಮಾದೇವಿ ಮತ್ತು ಗೌರಿ ಅವರ ಸೋದರಿ ಕವಿತಾ ಲಂಕೇಶ್‌ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ತಮ್ಮನ್ನು ಕೋರಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

ಧಾರವಾಡ: ಸಿಎಂ ಸಿದ್ದರಾಮಯ್ಯನವರ (CM Siddaramaiah) ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು (Dharwad Police) ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ.

ತನ್ವೀರ್ ಪೀರಾ (Tanveer Peera) ಮೇಲಿನ ಅಪರಾಧಗಳ‌ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಇತ್ತು. ಆದರೆ ಯಾವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಶಾಸಕ ಯತ್ನಾಳ್‌ ಸಿಡಿಸಿದ ʼಐಸಿಸ್‌ ಬಾಂಬ್‌ʼ ನಿಂದ ಎಚ್ಚೆತ್ತ ಪೊಲೀಸರು ಕಾರ್ಯಕ್ರಮ ಆಯೋಜಕರಿಂದ ಮತ್ತೊಮ್ಮೆ ವೇದಿಕೆ ಮೇಲೆ ಕುಳಿತವರಿಂದ ಮಾಹಿತಿ ಪಡೆಯುತ್ತಿದ್ದಾರೆ.

ವೇದಿಕೆಯ ಮೇಲೆ ಸಿಎಂ ಜೊತೆಗಿದ್ದ 26 ಜನರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್‌ ಮತ್ತಷ್ಟು ಬಾಂಬ್‌ ಸಿಡಿಸುವ ಸಾಧ್ಯತೆ ಇರುವುದರಿಂದ ಸರ್ಕಾರ ಎಚ್ಚೆತ್ತುಕೊಂಡು ಗಣ್ಯರ ಮಾಹಿತಿ ಸಂಗ್ರಹಿಸಲು ಸೂಚಿಸಿದೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ್ದ ಯತ್ನಾಳ್‌, ತನ್ವೀರ್‌ ಪೀರಾ ಮದರಸಾ ನಡೆಸುತ್ತಿದ್ದು, ವಿಮಾನದಲ್ಲೇ ದೇಶ, ವಿದೇಶಗಳನ್ನು ಸುತ್ತುತ್ತಿದ್ದಾರೆ. ಈ ವ್ಯಕ್ತಿಗೆ ಹಣ ನೀಡುವವರು ಯಾರು? ಟಿಕೆಟ್‌ ಬುಕ್‌ ಮಾಡುವವರು ಯಾರು? ಈ ವ್ಯಕ್ತಿಯ ಖಾತೆಗೆ ಯಾವ ದೇಶದಿಂದ ಎಷ್ಟು ಹಣ ಬರುತ್ತದೆ ಎಂಬುದನ್ನು ಪತ್ತೆ ಹಚ್ಚಿದರೆ ಎಲ್ಲಾ ವಿಚಾರಗಳು ಬಯಲಾಗುತ್ತದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಈ ವ್ಯಕ್ತಿಯ ಮೇಲೆ ತನಿಖೆ ನಡೆಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು.

ಯಾರು ಈ ತನ್ವೀರ್‌ ಪೀರಾ?
ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ಪೀರಾ ಈ ವರ್ಷದ ಮೇ ತಿಂಗಳಿನಲ್ಲಿ ವಿಜಯಪುರದಲ್ಲಿ ನಡೆದಿದ್ದ ಶೂಟೌಟ್ ಕೇಸಲ್ಲಿ ಮೂರನೇ ಆರೋಪಿಯಾಗಿದ್ದಾರೆ.

ಮೇ 6 ರಂದು ವಿಜಯಪುರದಲ್ಲಿ ನಡೆದ ಶೂಟೌಟ್‌ನಲ್ಲಿ ರೌಡಿ ಶೀಟರ್ ಹೈದರಾಲಿ ನದಾಫ್ ಎಂಬುವನ ಹತ್ಯೆ ನಡೆದಿತ್ತು. ಆ ಹತ್ಯೆಯನ್ನು ತನ್ವೀರ್‌ ಪೀರಾ ಹಾಸ್ಮಿ ಮಾಡಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಹತ್ಯೆಯಾದ ಹೈದರಾಲಿ ಪತ್ನಿ ನಿಶಾತ್ ದೂರು ದಾಖಲಿಸಿದ್ದರು. ದೂರಿನಲ್ಲಿ ತನ್ವೀರ್ ಪೀರಾ ಹೆಸರನ್ನು ಕೂಡ ಹಾಕಲಾಗಿತ್ತು. ಈ ಪ್ರಕರಣದ ತನಿಖೆ ನಡೆಯುತ್ತಿದೆ.

ವಿಜಯಪುರ ಮೂಲದವ ಸದ್ಯ ಸೂಫಿ ಎಂದು ಗುರುತಿಸಿಕೊಂಡಿರುವ ತನ್ವೀರ್ ಪೀರಾ ದೇಶಾದ್ಯಂತ ಸುತ್ತಾಟ ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಮತ್ತು ತನ್ವೀರ್ ಪೀರಾ ನಡುವಣ ವೈರತ್ವ ಇಂದಿನದ್ದಲ್ಲ. 2018ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತ್ನಾಳ್ ವಿರುದ್ಧ ತನ್ವೀರ್ ಅಬ್ಬರಿಸಿದ್ದರು. ಮುಂದೆ ಬಕ್ರೀದ್ ಬರಲಿದೆ. ಆಗ ಕುರುಬಾನಿ ಕೊಡುತ್ತೇವೆ. ಆಗ ಸೈತಾನ್ ವಿರೋಧಿಸಿದರೆ ನಾವು ಸುಮ್ಮನಿರಲ್ಲ. ಒಂದು ಕುರುಬಾನಿ ಜೊತೆಗೆ ಇನ್ನೊಂದು ಕುರುಬಾನಿ ಆಗಬಾರದು. ಈಗಲೇ ಎಚ್ಚರಿಸುತ್ತಿದ್ದೇನೆ ಎಂದಿದ್ದರು. ಈ ಸಂಬಂಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ತನ್ವೀರ್ ವಿರುದ್ಧ ಕೇಸ್ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist