ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳಗಾವಿ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ!

Twitter
Facebook
LinkedIn
WhatsApp
ಬೆಳಗಾವಿ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ!

ಬೆಳಗಾವಿ: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರಿಗೆ ಹಕ್ಕುಚ್ಯುತಿಯಾಗಿದೆ ಎಂಬ ವಿಚಾರ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಅರಣ್ಯಾಧಿಕಾರಿಗಳಿಂದ ಹಕ್ಕುಚ್ಯುತಿಯಾಗಿದೆ ಎಂದು ಆರೋಪಿಸಿ ಪ್ರಸ್ತಾವ ಮಂಡಿಸಲು ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದರು.

 

ತಮ್ಮ ಮೇಲೆ ಎಫ್‌ಐಆರ್‌ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ, ಇದನ್ನು ಸ್ಪೀಕರ್‌ ಯು.ಟಿ. ಖಾದರ್‌ (Speaker UT Khader) ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರವಾನಿಸಿದ್ದಾರೆ.

ಅರಣ್ಯೇತರ ಉದ್ದೇಶಗಳಿಗೆ ಪರಿವರ್ತಿಸಲಾಗಿದ್ದಂತಹ ಅರಣ್ಯ ಭೂಮಿಯ (Forest Land) ಪೈಕಿ ಶೇಕಡಾ 40ರಷ್ಟು ಭೂಮಿಯನ್ನು ಮರಳಿ ಮೀಸಲು ಅರಣ್ಯವಾಗಿ (Reserve Forest) ಪರಿವರ್ತನೆ ಮಾಡುವ ರಾಜ್ಯ ಸರ್ಕಾರದ (State Government) ನಿರ್ಧಾರದಿಂದ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ಸಂಘರ್ಷ ನಡೆದಿತ್ತು. ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತುಹಾಕುತ್ತಿರುವ ವೇಳೆ ರೈತರ ಪರ ನಿಂತಿದ್ದ ಶಾಸಕ ಹರೀಶ್‌ ಪೂಂಜಾ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಇದಕ್ಕೆ ಆಕ್ರೋಶವನ್ನು ಹೊರಹಾಕಿರುವ ಹರೀಶ್‌, ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ. ಎಫ್‌ಐಆರ್‌ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸುವುದಾಗಿ ಶಾಸಕ ಹರೀಶ್‌ ಪೂಂಜಾ ಒತ್ತಾಯಿಸಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಸದನ ಸದಸ್ಯರು ಬೆಂಬಲ ಸೂಚಿಸಲಾಗಿದೆ. ಇದೇ ವೇಳೆ ಸ್ಪೀಕರ್‌ ಯು.ಟಿ. ಖಾದರ್‌, ಅವರು ಇದನ್ನು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರವಾನಿಸಿದ್ದಾರೆ.

ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಆರಂಭವಾದರೂ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಸದನದ ಬಾವಿಗಿಳಿದಿದ್ದ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಆಗ್ರಹಿಸಿದ್ದರು. ಇದಕ್ಕೆ ಜೆಡಿಎಸ್ ಸದಸ್ಯರು ಸಾಥ್‌ ನೀಡಿದ್ದರು.

ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು‌ ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಸುನೀಲ್ ಕುಮಾರ್ ಮನವಿ ಮಾಡಿದರು. ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್‌ ಯು.ಟಿ. ಖಾದರ್‌, ನಾಳೆ ಬೆಳಗ್ಗೆ ಅವಕಾಶ ‌ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧದ ಕೇಸ್‌ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಶಾಸಕ ಸುನೀಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಬಿಗಿಪಟ್ಟಿಗೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.

ಕಾಂಗ್ರೆಸ್‌ ಆಕ್ಷೇಪ

ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ‌ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist