ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯೆಯೇ ಹೃದಯಾಘಾತದಿಂದ ಮೃತ್ಯು!

Twitter
Facebook
LinkedIn
WhatsApp
ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯೆಯೇ ಹೃದಯಾಘಾತದಿಂದ ಮೃತ್ಯು!

ಉಡುಪಿ : ದೇಶಾದ್ಯಂತ ಹೃದಯಾಘಾತ (Heart Attack) ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ (Udupi District Hospital) ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.

ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಾಕ್ಟರ್‌ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.

Road Accident : ಲಾರಿ ಓವರ್‌ ಟೇಕ್ ಮಾಡಲು ಹೋಗಿ ಸಾವಿನ ಮನೆ ಸೇರಿದ ನಾಲ್ವರು! ಮತ್ತೊಬ್ಬ ಗಂಭೀರ

ರಾಯಚೂರು: ಲಾರಿಯನ್ನು ಓವರ್‌ ಟೇಕ್‌ ಮಾಡಲು ಹೋಗಿ ಟಾಟಾಯೆಸ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ರಾಯಚೂರು ಜಿಲ್ಲೆ ಸಿಂಧನೂರು ತಾ.ಪಗಡದಿನ್ನಿ ಕ್ಯಾಂಪ್ ಬಳಿ ಘಟನೆ ನಡೆದಿದೆ.

ಇಸ್ಮಾಯಿಲ್(25), ಚನ್ನಬಸವ (26), ಅಂಬರೀಶ್ (20), ರವಿ( 21) ಮೃತ ದುರ್ದೈವಿಗಳು. ಮದುವೆ ಸಮಾರಂಭಕ್ಕಾಗಿ ಶಾಮಿಯಾನ ಲೋಡ್‌ನೊಂದಿಗೆ ಡೆಕೋರೆಷನ್ ಮಾಡಲು ಹೊರಟ್ಟಿದ್ದರು. ಈ ವೇಳೆ ಲಾರಿಯನ್ನು ಓವರ್‌ ಟೆಕ್‌ ಮಾಡಲು ಹೋಗಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಯುವಕ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist