ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಗ್ರರ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಪೋಲೀಸ್ ಅಧಿಕಾರಿ ಸಾವು

Twitter
Facebook
LinkedIn
WhatsApp
ಉಗ್ರರ ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಪೋಲೀಸ್ ಅಧಿಕಾರಿ ಸಾವು

ನವದೆಹಲಿ: ಕಳೆದ ಅಕ್ಟೋಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪೊಲೀಸ್ ಅಧಿಕಾರಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಪತ್ನಿಯನ್ನು ಅಗಲಿದ್ದಾರೆ.

ವೈದ್ಯಕೀಯ ತಂಡದ ಉತ್ತಮ ಪ್ರಯತ್ನಗಳ ಹೊರತಾಗಿಯೂ, ವಾನಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ನ ಪುತ್ರ ವಾನಿ ಅವರು ಅಕ್ಟೋಬರ್ 29 ರಂದು ಭಾನುವಾರ ಈದ್ಗಾ ಮೈದಾನದಲ್ಲಿ ಹಲವು ಯುವಕರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಏಕಾಂಗಿ ಅವರ ಕಣ್ಣು, ಹೊಟ್ಟೆ ಮತ್ತು ಕುತ್ತಿಗೆಗೆ ಮೂರು ಗುಂಡುಗಳನ್ನು ಹಾರಿಸಿದ್ದರು. 

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾನಿ ಅವರನ್ನು ಸೌರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ವಿಮಾನದ ಮೂಲಕ ದೆಹಲಿಯ ಏಮ್ಸ್‌ಗೆ ಕರೆತರಲಾಗಿತ್ತು.

ವಾನಿ ಅವರ ಸಾವು ಅವರ ಸಹೋದ್ಯೋಗಿಗಳು ಮತ್ತು ಪ್ರೀತಿಪಾತ್ರರಲ್ಲಿ ಆಳವಾದ ನಷ್ಟವನ್ನು ಉಂಟುಮಾಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಅವರು ಹೇಳಿದ್ದಾರೆ.

ತೆಲಂಗಾಣ ಮಾಜಿ ಸಿಎಂ KCR ದಿಢೀರ್‌ ಆಸ್ಪತ್ರೆಗೆ ದಾಖಲು – ಬೆಂಬಲಿಗರಲ್ಲಿ ಆತಂಕ

ಹೈದರಾಬಾದ್‌: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K Chandrashekar Rao )ಅವರು ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಂದ್ರಶೇಖರ್‌ ರಾವ್‌ ಅವರಿಂದು (ಡಿ.8) ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ (Hyderabad Hospital) ದಾಖಲಿಸಲಾಗಿದೆ.

ಕೆ. ಚಂದ್ರಶೇಖರ್ ರಾವ್ ಅವರು ಕುಸಿದು ಬಿದ್ದ ನಂತರ ಸೊಂಟ ಮುರಿತಕ್ಕೆ ಒಳಗಾಗಿಗಿರಬಹುದು ಎಂದು ವೈದ್ಯರು (Doctor) ಶಂಕಿಸಿದ್ದಾರೆ. ಆರೋಗ್ಯ ತಪಾಸಣೆ (ಸ್ಕ್ಯಾನಿಂಗ್‌) ನಡೆಸಿದ ಬಳಿಕ ನಿಜಾಂಶ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಸಿಆರ್‌ (KCR) ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ. 

ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist