ಉಪ್ಪಿನಂಗಡಿ : ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ದಂಪತಿ ಪಾರು!
ಉಪ್ಪಿನಂಗಡಿ ಡಿಸೆಂಬರ್ 08 : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯ ಗಣಪತಿ ಕಟ್ಟೆ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆ ಮಧ್ಯದಲ್ಲಿದ್ದ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ.
ಘಟನೆಯಿಂದ ಕಾರಿನಲ್ಲಿದ್ದ ವಾಸು ಮತ್ತವರ ಪತ್ನಿ ವೀಣಾ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ.
NGO ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಧರ್ಮಸ್ಥಳ, ಡಿಸೆಂಬರ್ 08: ಸೇವಾ ಸಂಸ್ಥೆ ಹೆಸರಿನಲ್ಲಿ ಹಣ ವಸೂಲಿ ದಂಧೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಧನುಷ್ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ. ಡಿಸೆಂಬರ್ 7 ರಂದು ಇಬ್ಬರು ಯುವಕರು ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಪರಾಂಡ ಎಂಬಲ್ಲಿಗೆ ಆಗಮಿಸಿದ್ದು ಧನುಷ್ ಮನೆಗೂ ಭೇಟಿ ನೀಡಿರುತ್ತಾರೆ.
ಈ ಯುವಕರು ತಾವು ಬೆಂಗಳೂರಿನಲ್ಲಿರುವ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಇದರ ವತಿಯಿಂದ ದೇಣಿಗೆ ಸಂಗ್ರಹಣೆಗೆ ಬಂದಿದ್ದು, ದೇಣಿಗೆ ನೀಡುವಂತೆ ವಿನಂತಿಸಿದ್ದಾರೆ. ಸಂಶಯಗೊಂಡ ಧನುಶ್ ಯುವಕರ ಬಳಿಯಿದ್ದ ಕರಪತ್ರದಲ್ಲಿದ್ದ ಸಂಸ್ಥೆಯದ್ದೆಂದು ಹೇಳಲಾದ ಮೊಬೈಲ್ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ.
ಆಗ ಆ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿರುವುದಿಲ್ಲವೆಂದು ತಿಳಿಸಿರುತ್ತಾರೆ. ಆದ್ದರಿಂದ ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹಣೆ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದಾಗಿ ಧನುಶ್ ದೂರು ನೀಡಿದ್ದು ಆರೋಪಿಗಳ ವಿರುದ್ದ ಐಪಿಸಿ ಕಲಂ 420 ಜೊತೆಗೆ 34ರಂತೆ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.