ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ ಶಿಕ್ಷಕಿ..!

Twitter
Facebook
LinkedIn
WhatsApp
ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ ಶಿಕ್ಷಕಿ..!

ಬೆಂಗಳೂರು, ಡಿ.08: ಬೆಂಗಳೂರಿನ ಖಾಸಗಿ ಶಾಲೆ(Private School) ಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮೆಂಟ್ ಕಂಪ್ಲೀಟ್ ಮಾಡಿಲ್ಲ ಎಂದು  ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡದಿದ್ದಾರೆ. ಕೈಗೆ ರಾಡ್​ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ.

ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ

ಇನ್ನು ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸೂಕ್ತ ಕ್ರಮದ ಭರವಸೆ

ಈ ಕುರಿತು ಮಾತನಾಡಿದ ಬಿಎಇ ಶಶಿಕಲಾ ಎಂಬುವವರು ‘ಲಾರ್ಡ್ಸ್ ಶಾಲೆಯ ಶಿಕ್ಷಕಿಯಿಂದ ಹಲ್ಲೆ ವಿಚಾರ ದೂರು ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ನಮಗೆ ನಿನ್ನೆ(ಡಿ. ಈ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನಲೆ ಘಟನೆಯ ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನ ಕಳುಹಿಸಿದ್ದೇವೆ. ಜೊತೆಗೆ ಶಾಲೆಗೆ ನೋಟಿಸ್ ಕೊಡುತ್ತಾ ಇದ್ದೀವಿ. ಕಂಪ್ಲೀಟ್ ವರದಿ ಪಡೆದು ಶಾಲೆಗೆ ನೋಟಿಸ್ ಕೊಟ್ಟು ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಶಾಲೆಯಿಂದ ಮಾಹಿತಿ ಬಂದ್ ಬಳಿಕ ಸೂಕ್ತ ಕ್ರಮವಹಿಸುವುದಾಗಿ ಹೇಳಿದರು.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಪುತ್ರನಿಂದ ವಿದ್ಯಾರ್ಥಿ ಮೇಲೆ ಹಲ್ಲೆ, ಎಫ್​ಐಆರ್​ ದಾಖಲು

ಹೈದರಾಬಾದ್‌ನ ಮಹೀಂದ್ರ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ರ‍್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಸಾಯಿ ಭಗೀರಥ ತನ್ನ ಸ್ನೇಹಿತರೊಂದಿಗೆ ಸೇರಿ ಜೂನಿಯರ್ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದರೆ, ವಿಡಿಯೋ ವೈರಲ್ ಆದ ನಂತರ ಸಾಯಿ ಭಗೀರಥ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ದುಂಡಿಗಲ್ ಪೊಲೀಸ್ ಠಾಣೆಗೆ ದೂರು ನೀಡಿದೆ. ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರನ ವಿರುದ್ಧ ಮಂಗಳವಾರ ವಿದ್ಯಾರ್ಥಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬಿಜೆಪಿ ನಾಯಕನ ಮಗ ಇತ್ತೀಚೆಗೆ ತನ್ನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದ ಎಂಬ ಕಾರಣಕ್ಕೆ ಸಹ ವಿದ್ಯಾರ್ಥಿಗೆ ಖಾಸಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಥಳಿಸಿದ ಆರೋಪ ಕೇಳಿಬಂದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಬ್ಬ ಯುವಕ ಮತ್ತೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ಸಂಚಲನದ ರ‍್ಯಾಗಿಂಗ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಸಾಯಿ ಭಗೀರಥ ಮತ್ತಿತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ದಿನಗಳಲ್ಲಿ ರಜೆಯ ಕಾರಣ ಹಾಸ್ಟೆಲ್ ಮುಚ್ಚಿದ್ದು, ವಿದ್ಯಾರ್ಥಿಗಳು ಮರಳಿದ ನಂತರ ಘಟನೆ ನಡೆದ ಸಮಯ ವಿಚಾರಣೆ ನಂತರ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಡಿ ಸಂಜಯ್ ಅವರ ಪುತ್ರ ಈ ಹಿಂದೆ ಹಲವು ವಿವಾದಗಳಲ್ಲಿ ಭಾಗಿಯಾಗಿದ್ದು, ದೆಹಲಿಯಲ್ಲಿ ಓದುತ್ತಿದ್ದಾಗ ಇದೇ ರೀತಿಯ ವರ್ತನೆಗಾಗಿ ಕಾಲೇಜಿನಿಂದ ಹೊರಹಾಕಲ್ಪಟ್ಟ ಘಟನೆಯೂ ಸೇರಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿ ಭಗೀರಥ ಶ್ರೀ ರಾಮ್ ಎಂಬ ವಿದ್ಯಾರ್ಥಿಯನ್ನು ನಿಂದಿಸಿ ಹಲ್ಲೆ ಮಾಡುತ್ತಿರುವುದು ಕಂಡುಬಂದಿದೆ. ಈ ಜಗಳದಲ್ಲಿ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ಬಂಡಿ ಸಂಜಯ್ ಅವರ ಪುತ್ರ ಸಾಯಿ ಭಗೀರಥ ಇದೇ ವಿಶ್ವವಿದ್ಯಾಲಯದಲ್ಲಿ ಕಾನೂನು ಓದುತ್ತಿದ್ದಾರೆ.

ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಭಗೀರಥ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು, ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಅಥವಾ ಕೊಲೆ ಮಾಡದಂತೆ ಎಚ್ಚರಿಕೆ ನೀಡಿದ್ದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist