ಲೀಲಾವತಿ ಅಂತಿಮ ದರ್ಶನಕ್ಕೆ ಬಂದ ಸೊಸೆ ಮತ್ತು ಮೊಮ್ಮಗ..!
ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು (Anu) ಮತ್ತು ಲೀಲಾವತಿ (Leelavati) ಮೊಮ್ಮಗ ಯುವರಾಜ್ (Yuvraj) ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.
ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.
ಗಣ್ಯರ ದರ್ಶನ ನಂತರ ಅಂತ್ಯಕ್ರಿಯೆ
ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ ಜೆಸಿಬಿ ಮೂಲಕ ಫಾರ್ಮ್‌ಹೌಸ್‌ನಲ್ಲಿ ಸಮಾಧಿ ತೆಗೆಯುವ ಕಾರ್ಯ ಆರಂಭಗೊಂಡಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ತರಯಾರಿ ಶುರುವಾಗಿದೆ. ಮತ್ತೊಂದೆಡೆ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿಗಳು ಬರುವ ಗಣ್ಯರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ.
ಬೆಳಗ್ಗೆ 9:30ರ ವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೈದಾನ ಸುತ್ತ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರು ದರ್ಶನ ಪಡೆಯುತ್ತಿದ್ದು, ಎಲ್ಲರೂ ಲೀಲಾವತಿ ಅವರ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ. ಇತರ ಗಣ್ಯರೂ ಅಂತಿಮ ದರ್ಶನ ಪಡೆದ ಬಳಿಕ ಅಂತ್ಯಕ್ರಿಯೆ ಕಾರ್ಯ ನೆರವೇರಲಿದೆ.
ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ
ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು (Funeral) ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ (Soladevanahalli) ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.
ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.
ದರ್ಶನ ಪಡೆಯಲು ಬಂದ ಮೊಮ್ಮಗ, ಸೊಸೆ