ಕಾರ್ಕಳ :ಖಾಸಗಿ ಬಸ್ ಮತ್ತು ಜೀಪ್ ನಡುವೆ ಭೀಕರ ಅಪಘಾತ; ಓರ್ವ ಸಾವು - ಹಲವರಿಗೆ ಗಂಭೀರ ಗಾಯ
ಕಾರ್ಕಳ ಡಿಸೆಂಬರ್ 10 : ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ.
ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿಬಸ್ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು
ಬಳಿಕ ಬಸ್ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜೀಪಿನಲ್ಲಿದ್ದವರು ಸ್ಥಳಿಯ ದೈವದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ಸಾಗುತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್ ನಲ್ಲಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.