ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅತೀ ಕಡಿಮೆ ಇನ್ನಿಂಗ್ಸ್​​ಗಳಲ್ಲಿ ಈ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Twitter
Facebook
LinkedIn
WhatsApp
Suryakumar Yadav has written this record in the shortest innings

ಗೆಬ್ಬಾಗದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 2000 ರನ್ ಪೂರೈಸಿದ್ದರು.

  • ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳನ್ನು ಎದುರಿಸಿ 2 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರೋನ್ ಫಿಂಚ್ ಹೆಸರಿನಲ್ಲಿತ್ತು.
  • ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಟಿ20 ಕ್ರಿಕೆಟ್​ನಲ್ಲಿ 1283 ಎಸೆತಗಳನ್ನು ಎದುರಿಸಿ 2000 ರನ್ ಪೂರೈಸಿದ್ದರು. ಇದು ಇದುವರೆಗಿನ ವಿಶ್ವ ದಾಖಲೆಯಾಗಿತ್ತು.
  • ಆದರೀಗ ಕೇವಲ 1164 ಎಸೆತಗಳಲ್ಲಿ 2000 ರನ್ ಪೂರೈಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ:

ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸುವ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ಗಳಲ್ಲಿ 2000 ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್​ಗಳನ್ನು ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿ ಎಂಬುದು ವಿಶೇಷ. ಈ ಇಬ್ಬರು ಆಟಗಾರರು 52 ಟಿ20 ಇನಿಂಗ್ಸ್​ಗಳ ಮೂಲಕ 2000 ರನ್ ಪೂರೈಸಿ ವಿಶ್ವ ದಾಖಲೆ ಬರೆದಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಕಡಿಮೆ ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿ:
  1. ಸೂರ್ಯಕುಮಾರ್ ಯಾದವ್ (ಭಾರತ)- 1164 ಎಸೆತಗಳು
  2. ಆರೋನ್ ಫಿಂಚ್ (ಆಸ್ಟ್ರೇಲಿಯಾ)- 1283 ಎಸೆತಗಳು
  3. ಗ್ಲೆನ್ ಮ್ಯಾಕ್ಸ್​​ವೆಲ್ (ಆಸ್ಟ್ರೇಲಿಯಾ)- 1304 ಎಸೆತಗಳು
  4. ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)- 1398 ಎಸೆತಗಳು
  5. ಕೆಎಲ್ ರಾಹುಲ್ (ಭಾರತ)- 1415 ಎಸೆತಗಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist