ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

25 ವರ್ಷಗಳಿಂದ ಮಡಿಕೇರಿ ಬಿಲ್ಲವ ಸಂಘ ಸೇರಿ ಇತರ ಸಂಘಗಳ ಜಾಗ ಮಂಜೂರಾತಿ ಆಗದೇ ಇರುವ ಸಮಸ್ಯೆಯನ್ನು ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಹರೀಶ್ ಕುಮಾರ್

Twitter
Facebook
LinkedIn
WhatsApp
25 ವರ್ಷಗಳಿಂದ ಮಡಿಕೇರಿ ಬಿಲ್ಲವ ಸಂಘ ಸೇರಿ ಇತರ ಸಂಘಗಳ ಜಾಗ ಮಂಜೂರಾತಿ ಆಗದೇ ಇರುವ ಸಮಸ್ಯೆಯನ್ನು ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಹರೀಶ್ ಕುಮಾರ್

ಬೆಂಗಳೂರು: ಕಳೆದ 25 ವರ್ಷಗಳಿಂದ ಹಿಂದುಳಿದ ವರ್ಗಗಳ ಸಂಸ್ಥೆಗಳ ಜಾಗ ಮಂಜೂರಾತಿಯ ಕುರಿತು ವಿಧಾನ ಪರಿಷತ್ತಿನಲ್ಲಿ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ಪ್ರಸ್ತಾಪಿಸಿದರು.

ಮಡಿಕೇರಿ ಬಿಲ್ಲವ ಸಂಘ 25 ವರ್ಷಗ ಗಳಿಂದ ಜಾಗಕ್ಕೆ ಸತತವಾಗಿ ಅರ್ಜಿ ಸಲ್ಲಿಸುತ್ತಿದ್ದರೂ, ಇದುವರೆಗೆ ಜಾಗ ಮಂಜೂರಾತಿ ಆಗದೆ ಇರುವ ಹಾಗೂ ಕಾವೂರು ಬಿಲ್ಲವ ಸಂಘ ಕಳೆದ 15 ವರ್ಷಗಳಿಂದ ಜಾಗ ಮಂಜೂರಾತಿಯ ಸಮಸ್ಯೆಯನ್ನು ಎದುರಿಸುತ್ತಿದೆ ಎಂಬುದನ್ನು ಆಧಾರವಾಗಿಟ್ಟುಕೊಂಡು ವಿಧಾನ ಪರಿಷತ್ತಿನಲ್ಲಿ ಈ ಗಂಭೀರ ವಿಷಯದ ಕುರಿತು ಸರಕಾರದ ಗಮನ ಸೆಳೆದರು.

ಸರ್ಕಾರ ಕಡತಗಳನ್ನು ತಿರಸ್ಕರಿಸುವಾಗ ಸರಕಾರೇತರ ಸಂಸ್ಥೆಗಳನ್ನು ಖಾಸಗಿ ಎಂದು ನಮೂದಿಸುವ ಬಗ್ಗೆ ಬದಲಾವಣೆ ಅಗತ್ಯವಿದೆ ಎಂಬುದನ್ನು ಪರಿಷತ್ತಿನಲ್ಲಿ ಸರಕಾರದ ಗಮನಕ್ಕೆ ತಂದರು.

25 ವರ್ಷಗಳಿಂದ ಜಮೀನು ಮಂಜೂರಾತಿ ಆಗದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿಂದುಳಿದ ವರ್ಗದ ಈ ಸಂಸ್ಥೆಗಳ ಅಭಿವೃದ್ಧಿಯ ಬಗ್ಗೆ ನಾವು ಗಮನಹರಿಸಬೇಕಾಗಿದೆ ಎಂದು ಸರಕಾರದ ಮುಂದೆ ಭಿನ್ನವಿಸಿಕೊಂಡಿದ್ದಾರೆ.

ಸಂಸತ್ ದಾಳಿ ಘಟನೆಯನ್ನು ಎಲ್ಲರೂ ಖಂಡಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಸಂಸತ್ (Parliament) ದಾಳಿಯಾದ ಘಟನೆಯನ್ನು ಎಲ್ಲರೂ ಖಂಡಿಸಬೇಕಾಗುತ್ತದೆ. ಪಾಸ್‍ಗಳನ್ನು ಕೊಡುವಾಗ ಗೊತ್ತಿರುವವರಿಗೆ ಮಾತ್ರ ಕೊಡಬೇಕು. ಗೊತ್ತಿಲ್ಲದವರಿಗೆ ಪಾಸ್ ಕೊಡಬಾರದು. ಈ ಘಟನೆ ಮೇಲ್ನೋಟಕ್ಕೆ ಭದ್ರತಾ ಲೋಪ ಎನ್ನುವುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಲೋಕಸಭೆ (Loksabha) ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್‍ಗೆ ಯಾರಿಂದಲೋ ಪಾಸ್ ಪಡೆದು ಹೋಗಿದ್ದಾರೆ. ಸಂಸತ್ ಸದಸ್ಯರೊಬ್ಬರಿಂದ ಪಾಸ್ ಪಡೆದಿದ್ದಾರೆ ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಸರಿಯಾಗಿ ಅವರನ್ನು ತಪಾಸಣೆ ಮಾಡಿಲ್ಲ ಅನ್ಸತ್ತೆ. ಸಚಿವರಿಗೆ ಸೇರಿ ಎಲ್ಲರಿಗೂ ತಪಾಸಣೆ ಮಾಡ್ತಾರೆ. ತಪಾಸಣೆ ಮಾಡಿದರೂ ಹೇಗೆ ಸ್ಮೋಕ್ ಸ್ಪ್ರೇ ಮಾಡಿದ್ರು?. ನಾನು ಅನುಮಾನ ವ್ಯಕ್ತಪಡಿಸ್ತಿಲ್ಲ. ಇಲ್ಲೂ ಕೂಡಾ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು. ಪಾಸ್ ಪಡೆದು ಒಳ್ಳೆಯವ್ರೂ ಬರಬಹುದು, ಕೆಟ್ಟವರೂ ಬರಬಹುದು, ಉಗ್ರರೂ ಬರಬಹುದು. ಹಿಂದೆ ಸಂಸತ್ ನಲ್ಲಿ ಉಗ್ರರು ನುಗ್ಗಿದ್ರು ಎಂದು ಸಿಎಂ ತಿಳಿಸಿದ್ದಾರೆ.

ಗೃಹ ಸಚಿವರು (Home Minister) ಅಧಿವೇಶನ ಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಕೊಡಲು ಹೇಳ್ತೀನಿ. ಸ್ಪೀಕರ್ ಅವರು ಕೂಡಾ ನಿಮ್ಮ ಸಿಬ್ಬಂದಿಗೆ ಹೇಳಿ ಭದ್ರತಾ ಲೋಪ ಆಗದಂತೆ ನೋಡಿಕೊಳ್ಳಬೇಕು. ಪಾಸ್ ಕೊಡುವಾಗಲೂ ಎಚ್ಚರಿಕೆ ವಹಿಸಬೇಕು. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸ್ತೇನೆ. ಸದ್ಯಕ್ಕೆ ಸುದೈವ ಸಂಸತ್ ನಲ್ಲಿ ಏನೂ ಆಗಿಲ್ಲ. ತಕ್ಷಣ ಸ್ಪೀಕರ್ ಕಲಾಪ ಮುಂದೂಡಿ ಎಲ್ಲರೂ ಹೊರಗೆ ಹೋಗಲು ಅವಕಾಶ ಮಾಡಿದ್ರು. ಗ್ಯಾಸ್ ಬಾಂಬ್ ಹಾಕಿದ್ದಾರೆ ಅಂತ ನನಗೆ ಇರೋ ಮಾಹಿತಿ ಟಿವಿಗಳಲ್ಲಿ ಬರ್ತಿದೆ ಎಂದರು.

ಯಾವುದು ಸ್ಫೋಟ ಆಗುತ್ತೋ ಅವೆಲ್ಲ ಬಾಂಬ್ ಗಳೇ ಅದು ಗ್ಯಾಸ್ ಆಗಿರಬಹುದು. ಠುಸ್ ಅನ್ನೋದು ಆಗಬಹುದು, ಪಟಾಕಿಗಳಿಗೂ ಬಾಂಬ್ ಪಟಾಕಿ ಅಂತ ಕರೀತೀವಲ್ಲ. ಬಹಳ ಎಚ್ಚರಿಕೆ ವಹಿಸೋದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist