ಕರಾವಳಿಯಲ್ಲಿ ಡಿಸೆಂಬರ್ 17 ರಿಂದ 3 ದಿನ ಮಳೆ ಮುನ್ಸೂಚನೆ..!
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 17 ರಿಂದ ಮತ್ತೆ ಮಳೆ ಅಬ್ಬರ ಜೋರಾಗಲಿದೆ. ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕ ಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಸಾಧಾರಣ ಮಳೆ ಆಗಲಿದ್ದರೆ ಒಂದೆರಡು ಕಡೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ. ಸದ್ಯ ರಾಜ್ಯದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದ್ದು ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.
ಬೆಂಗಳೂರು : ಕಿಲ್ಲರ್ BMTC ಗೆ ಮಹಿಳೆ ಬಲಿ, ಮಗು-ಪತಿ ಕೂದಲೆಳೆ ಅಂತರದಲ್ಲಿ ಪಾರು
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ರಾಜಧಾನಿಯಲ್ಲಿ ಮಹಿಳೆಯೋರ್ವಳನ್ನು ಬಲಿ ಪಡೆದರೆ, ಒಂದೂವರೆ ವರ್ಷದ ಪುಟ್ಟ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ, ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ನೆಲಕ್ಕೆ ಉರುಳಿದವರ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸೀಮಾ (21) ಸ್ಥಳದಲ್ಲೇ ಸಾವನ್ನಪ್ಪಿದರೆ, ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆ ಬಳಿಕ ಚಾಲಕ ಹಾಗೂ ನಿರ್ವಾಹಕರಿಬ್ಬರೂ ಬಸ್ಸನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಲತಃ ವಿಜಯನಗರ ಜಿಲ್ಲೆಯವರಾದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತಳ ಪತಿ ಗುರುಮೂರ್ತಿ ಸಿಂಗಸಂದ್ರದ ಬೆಸ್ಕಾಂ ಘಟಕದಲ್ಲಿ 8 ವರ್ಷದಿಂದ ಲೈನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.