ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ ಭರತ್ ಕಲ್ಲರ್ಪೆ!

Twitter
Facebook
LinkedIn
WhatsApp
ಪುತ್ತೂರು :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ ಭರತ್ ಕಲ್ಲರ್ಪೆ!

ಪುತ್ತೂರು ಡಿಸೆಂಬರ್ 14 : ಪುತ್ತೂರಿನ ನಿವಾಸಿ ಡಿಆರ್ ಡಿಓ ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಮನೆಯಲ್ಲಿ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಈತ ಎರಡು ತಿಂಗಳ ಹಿಂದೆಯಷ್ಟೇ ಹೈದರಾಬಾದ್ ನಲ್ಲಿರುವ DRDO ಸಂಸ್ಥೆಗೆ ತಾತ್ಕಾಲಿಕ ನೆಲೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಈ ನಡುವೆ ಕಳೆದ ಒಂದು ವಾರದ ಹಿಂದೆ ಸಂಸ್ಥೆಗೆ ರಾಜೀನಾಮೆ ನೀಡಿ ಊರಿಗೆ ಬಂದಿದ್ದರು, ಆದರೆ ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಈ ನಡುವೆ ನಿನ್ನೆ ರಾತ್ರಿ DRDO ಕಛೇರಿಯಿಂದ ಫೋನ್ ಬಂದಿತ್ತು ಎಂದು ಹೇಳಲಾಗಿದ್ದು, ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ : ಹೆತ್ತ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಕ್ಕಳು..!

ಹಾಸನ: ಹೆತ್ತ ತಾಯಿಯನ್ನು ಮಕ್ಕಳು ಮನೆಯಿಂದ ಹೊರದಬ್ಬಿದ ನೋವಿನ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಬೇಲೂರು ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದ ಹೊನ್ನಮ್ಮ ಹನುಮೇಗೌಡ ಎಂಬ ವೃದ್ಧೆ ಮಕ್ಕಳ ನಿರ್ಲಕ್ಷ್ಯಕ್ಕೆ ಒಳಗಾಗಿ ಗುಡಿಸಲೊಂದರಲ್ಲಿ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಸ್ಥಿತಿಯಲ್ಲಿದ್ದಾರೆ. ಆಕೆಯ ಹೆಸರಲ್ಲಿನಲ್ಲಿದ್ದ ಆಸ್ತಿಯನ್ನು ತಮ್ಮಿಬ್ಬರು ಮಕ್ಕಳು ಪಡೆದು ತಾಯಿಯ ಸಾಕುವಲ್ಲಿ ಹಿಂಜರಿದು ಎಲ್ಲಾ ವಿಚಾರದಲ್ಲೂ ಈ ವೃದ್ಧೆಯದ್ದೇ ತಪ್ಪೆಂದು ಬಿಂಬಿಸಿ ಬೇರೆಡೆ ವಾಸವಿದ್ದಾರೆ. ಇಳಿ ವಯಸ್ಸಿನ ಹಿರಿ ಜೀವದ ಸ್ಥಿತಿ ಕಂಡು ಮರುಗಿದ ಸುತ್ತಲಿನ ಜನರು ಆಕೆಯ ಊಟ, ಬಟ್ಟೆ ಆಸ್ಪತ್ರೆ ಖರ್ಚಿಗೆ ಸಹಾಯ ಮಾಡುತ್ತಿದ್ದಾರೆ, ಸುಮಾರು 80 ವರ್ಷ ವಯಸ್ಸಾಗಿರುವ ಹಿರಿ ಜೀವ ತನ್ನ ಯೌವ್ವನದಲ್ಲಿ ಮಕ್ಕಳಿಗಾಗಿ ಶ್ರಮವಹಿಸಿ ಅವರಿಗೆ ನೆಲೆ ಮಾಡಿಟ್ಟು, ಒಂದೊಳ್ಳೆ ಸಂಬಂಧ ಹಿಡಿದು ಮದುವೆ ಮಾಡಿಸಿ ಜಮೀನುನಲ್ಲಿ ಸಮಾನವಾಗಿ ಹಂಚಿದ ತಾಯಿಗೆ ಆಸರೆಯಾಗಬೇಕಾದ ಸಮಯದಲ್ಲಿ ಮಕ್ಕಳು ಮೀನಮೇಷ ಎಣಿಸಿ ಮನೆಯಿಂದ ಹೊರ ದಬ್ಬಿ ಅಮಾನವೀಯತೆ ಮೆರೆದಿದ್ದಾರೆ. ಮಕ್ಕಳ ಸುಖಕ್ಕೆ ಅಡ್ಡಿಯಾಗದೆ ತಾನೇ ಒಂದು ಗುಡಿಸಲಿನಲ್ಲಿ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾರೆ. ಬೀದಿಗೆ ಬಿದ್ದ ಇಳಿ ವಯಸ್ಸಿನ ವೃದ್ಧೆಯನ್ನು ಗ್ರಾಮಸ್ಥರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ತಹಶಿಲ್ದಾರ್ ಮಮತಾ ಎಂ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಂತ್ವನ ಹೇಳಿದ್ದಾರೆ.

ಆಕೆಯ ಮಕ್ಕಳ ಕರೆಸಿ ತರಾಟೆ ತೆಗೆದುಕೊಂಡ ಅವರು, ಇಳಿ ವಯಸ್ಸಿನ ತಾಯಿಗೆ ನೆರವಾಗದೆ ಇರುವುದಕ್ಕೆ ಶಿಕ್ಷೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಮಕ್ಕಳಿಗಾಗಿ ಜೀವನವನ್ನೇ ತ್ಯಾಗ ಮಾಡಿದ ತಾಯಿಯನ್ನು ನಿರ್ಲಕ್ಷ್ಯ ಮಾಡಲು ಹೇಗೆ ಮನಸ್ಸು ಬರುತ್ತದೆ ಎಂದು ತರಾಟೆಗೆ ತಗೊಂಡಿದ್ದಾರೆ, ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ. ತನ್ನ ಮಕ್ಕಳು ಸುಖವಾಗಿರಲಿ ಎಂದು ಜೀವನವಿಡಿ ಶ್ರಮಿಸುವ ಯಾವ ತಾಯಿಗೂ ಇಂತಹ ಸ್ಥಿತಿ ಬರಬಾರದು. ಕೊನೆಗಳಿಗೆಯಲ್ಲಿ ಸಂತೋಷದಿಂದ ನೆಮ್ಮದಿಯಾಗಿ ಜೀವ ಬಿಟ್ಟರೆ ಅದೇ ಮಕ್ಕಳಿಗೆ ಆಶೀರ್ವಾದ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಎಂದ ಅವರು ವೃದ್ಧೆಗೆ ಸರ್ಕಾರದಿಂದ ದೊರಕಿಸಬಹುದಾದ ಪಿಂಚಣಿ ಮತ್ತು ಗೃಹ ಲಕ್ಷ್ಮಿ ಯೋಜನೆಯ ಸೌಲಭ್ಯದ ಬಗ್ಗೆ ಗಮನ ಹರಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಾಗೂ ವೃದ್ಧೆಯ ಯೋಗಕ್ಷೇಮ ವಿಚಾರಿಸುವಂತೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸೂಚನೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist