ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ? ಆಸ್ಪತ್ರೆಗೆ ದಾಖಲು..!
ಹೊಸದಿಲ್ಲಿ: ಭಾರತಕ್ಕೆ ಹಲವು ಅಪರಾಧಗಳ ಮೂಲಕ ಕಂಟಕವಾಗಿದ್ದ, ಭಾರತದ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು (Dawood Ibrahim) ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು
ಜನವರಿಯಲ್ಲಿ, ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ ಎಂದು ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ತಿಳಿಸಿದ್ದರು.
ಭೀಕರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಆಗಿದ್ದಾನೆ. ಮುಂಬೈನಲ್ಲಿ 1993ರಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಅಮಾಯಕ ನಾಗರಿಕರು ಸಾವನ್ನಪ್ಪಿದ್ದರು. 750ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ. ದಾವೂದ್ ಇಬ್ರಾಹಿಂ ತಲೆಗೆ ಎನ್‌ಐಎ 25 ಲಕ್ಷ ಬಹುಮಾನವನ್ನೂ ಘೋಷಿಸಿದೆ. ಭಾರತಕ್ಕೆ ಬೇಕಾಗಿರುವ ಉಗ್ರರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಅಗ್ರಸ್ಥಾನದಲ್ಲಿದ್ದಾನೆ.