ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಮೆಜಾನ್ ಕಂಪನಿ ಮ್ಯಾನೇಜರ್ ಸ್ಥಳದಲ್ಲೇ ಸಾವು...!
ಬೆಂಗಳೂರು: ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಮಾಗಡಿ (Magadi) ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ (Accident) ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರೇಮಿಗಳು ಪರಾರಿ – ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ
ಬೆಳಗಾವಿ: ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ (Belagavi) ಪ್ರೇಮಿಗಳು (Lovers) ಪರಾರಿಯಾದ ಹಿನ್ನೆಲೆ ಯುವತಿಯ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆಯ (Father) ಶರ್ಟ್ ಕಾಲರ್ ಹಿಡಿದು ಎಳೆದು ತಂದು ನೆಲಕ್ಕೆ ಕೆಡವಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.
ಬೆಳಗಾವಿ ಮಹಾನಗರದಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಅಪಹರಣಕ್ಕೆ ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ತಂದೆಯನ್ನು ಅಮಾನವೀಯವಾಗಿ ಹಲ್ಲೆ ಮಾಡಿರುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಯವತಿಯನ್ನು ತಮಗೆ ಒಪ್ಪಿಸುವಂತೆ ಆಗ್ರಹಿಸಿ ಮೂವರು ಮಹಿಳೆಯರು ಸೇರಿದಂತೆ 8 ಜನರಿಂದ ಯುವಕನ ತಂದೆಗೆ ಜೀವ ಬೆದರಿಕೆಯೊಡ್ಡಿದ್ದು, ಮೊಬೈಲ್ ಕಸಿದುಕೊಂಡು ಹಲ್ಲೆ (Assault) ನಡೆಸಿದ್ದಾರೆ. ಅಲ್ಲದೇ ಅಪಹರಣಕ್ಕೆ ಯತ್ನಿಸಿರುವುದಾಗಿ ಯುವಕನ ತಂದೆ ಹೇಳಿದ್ದಾರೆ.
ಘಟನೆಯ ಕುರಿತು ಯುವಕನ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಪ್ರವತ್ತರಾದ ಬೆಳಗಾವಿ ನಗರ ಪೊಲೀಸರು 8 ಜನರನ್ನು ಬಂಧಿಸಿ ಯುವಕನ ತಂದೆಗೆ ರಕ್ಷಣೆ ನೀಡಿ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.