ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ...!

Twitter
Facebook
LinkedIn
WhatsApp
ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ...!

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ.

ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ ದೇವಸ್ಥಾನದ ಅನ್ನದಾನ ಕಾರ್ಯಕ್ರಮದಲ್ಲಿ ಮೃತ ಜೈಪ್ರಕಾಶ್ ಭಾಗಿಯಾಗಿದ್ದ. ಈ ವೇಳೆ ಕೆಲ ಹೊತ್ತು ಜೈ ಪ್ರಕಾಶ್​ನನ್ನ ನಾಲ್ಕೈದು ಜನ ಆರೋಪಿಗಳು ಅಬ್ಸರ್ವ್ ಮಾಡಿದ್ದಾರೆ.

ಏಳು ಗಂಟೆ ಸುಮಾರಿಗೆ ಏಕಾ ಏಕಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋಕೆ ಕೆಲ ದೂರ ಓಡಿದ್ದಾನೆ. ಈ ವೇಳೆ ವಿಜಯ ಸಾಗರ ಹೋಟೆಲ್​ಗೆ ಜೈಪ್ರಕಾಶ್ ನುಗ್ಗಿದ್ದು, ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಹೋಟೆಲ್​ನಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐದು ತಂಡ ರಚಿಸಿ ಆರೋಪಿಗಳ ಹುಡುಕಾಟ: ಡಿಸಿಪಿ ಸಿಕೆ ಬಾಬ 

ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಹೇಳಿಕೆ ನೀಡಿದ್ದು, ಸಂಜೆ‌ 6.30-6.40ಸುಮಾರಿಗೆ ಘಟನೆ ನಡೆದಿದೆ. ಜಯಪ್ರಕಾಶ್ ಎಂಬಾತ ಸಂಜೆ ಅನ್ನದಾನ ಕಾರ್ಯಕ್ರಮ ಮಾಡುತ್ತಿದ್ದ. ಅಲ್ಲಿಂದ ಓಡಿಸ್ಕೊಂಡು ಬಂದು ನಾಲ್ಕರಿಂದ ಐದು ಜನ ಆರೋಪಿಗಳು ಹೋಟೆಲ್ ಒಳಗಡೆ ಹತ್ಯೆ ಮಾಡಿದಾರೆ. ಈ ಹಿಂದೆ 2005-6ರಲ್ಲಿ ಕೊಲೆಯಾದವನ ಮೇಲೆ ಕೇಸ್ ಇದೆ.

ಅದಾದ ಮೇಲೆ ಈತ ಆಟೋ ಓಡಿಸ್ಕೊಂಡು ಬೇರೆ ಏರಿಯಾದಲ್ಲಿ ವಾಸವಾಗಿದ್ದ. ಈ ಹಿಂದೆ ಮರ್ಡರ್ ಕೇಸ್​ ಒಂದರಲ್ಲಿ ಭಾಗಿಯಾಗಿದ್ದ. ನಂತರ ಆ್ಯಕ್ಟೀವ್ ಆಗಿರುವುದರ ಬಗ್ಗೆ ಮಾಹಿತಿ ಸದ್ಯಕ್ಕಿಲ್ಲ. ಹಳೆ ದ್ವೇಷ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಇದೆ. ಐದು ತಂಡ ರಚಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

ಬೆಂಗಳೂರು : ಕಾನ್ಸ್​ಟೇಬಲ್ ಪ್ರಿಯಕರನಿಗೆ ಪ್ರಿಯತಮೆಯೇ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪುಟ್ಟೇನಹಳ್ಳಿ ಪೊಲೀಸರು (Puttenahalli Police Station) ಆರೋಪಿ ರಾಣಿ ಎಂಬುವವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಸಂಜಯ್​ಗೆ ಬೆಂಕಿ ಹಚ್ಚಿಲ್ಲವೆಂದು ಹೇಳಿಕೆ ನೀಡಿದ್ದು, ಮೃತ ಸಂಜಯ್​ ಹಾಗೂ ನನ್ನ ಮಧ್ಯೆ ಜಗಳವಾಗಿತ್ತು. ಈ ವೇಳೆ ನಿನ್ನ ಸಾಯಿಸುತ್ತೇನೆ ಎಂದು ಸಂಜಯ್ ಬೆದರಿಕೆ ಹಾಕಿದ್ದ. ಈ ನಡುವೆ ಆತನೇ ಹೋಗಿ ಬಾಟಲ್​ನಲ್ಲಿ ಒಂದು ಲೀಟರ್ ಪೆಟ್ರೋಲ್ ತಂದು ಆತನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಕಡ್ಡಿ ಗೀಚಿ ಬೆದರಿಕೆ ಹಾಕಿದ್ದ. ಆ ವೇಳೆ ಬೆಂಕಿ ಆಕಸ್ಮಿಕವಾಗಿ ಸಂಜಯ್ ಗೆ ತಗಲಿತ್ತು ಎಂದು ರಾಣಿ ಹೇಳಿದ್ದಾರೆ.

ಸದ್ಯ FSL ನಿಂದ ರಿಪೋರ್ಟ್ ಬಂದ ಬಳಿಕ ಘಟನೆಗೆ ಸ್ಪಷ್ಟ ಕಾರಣ ಸಿಗಲಿದೆ

ಇನ್ನು ಈ ಘಟನೆಯ ಕುರಿತು ಬಂಧಿತ ಆರೋಪಿಯನ್ನು ವಿಚಾರಣೆ ಮಾಡಿದ ಪೊಲೀಸರು, ಸದ್ಯ ಎಫ್​ಎಸ್​ಎಲ್​ನಿಂದ ರಿಪೋರ್ಟ್ ಬಂದ ಬಳಿಕ ಘಟನೆಗೆ ಸ್ಪಷ್ಟ ಕಾರಣ ಸಿಗಲಿದೆ ಎಂದಿದ್ದಾರೆ. ಇನ್ನು ಹೋಮ್ ಗಾರ್ಡ್ ಆಗಿದ್ದ ರಾಣಿಗೆ ಸಂಜಯ್ ಮಾತ್ರವಲ್ಲದೆ ಬೇರೊಬ್ಬನ ಜೊತೆ ಸಲುಗೆ ಇದ್ದಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಘಟನೆ ವಿವರ

ಪೇದೆಯಾಗಿರುವ ಸಂಜಯ್ ಮತ್ತು ಹೋಂಗಾರ್ಡ್ ಆಗಿರುವ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರ ಬೆಳೆದಿದೆ. ಮದುವೆಯಾಗಿದ್ದರೂ ಕೂಡ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ 2 ದಿನಗಳ ಹಿಂದೆ ಆಕೆ ಮನೆಗೆ ಸಂಜಯ್ ಹೋಗಿದ್ದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎನ್ನಲಾಗಿತ್ತು. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist