ಪುತ್ತೂರು : ನಿಯಂತ್ರಣ ತಪ್ಪಿ ಹೊಳೆಗೆ ಉರುಳಿದ ಕಾರು ; ಚಾಲಕ ಅಪಾಯದಿಂದ ಪಾರು.!
ಮಂಗಳೂರು, ಡಿ.29: ನಿಯಂತ್ರಣ ತಪ್ಪಿ ಹೊಳೆಗೆ ಕಾರು ಉರುಳಿ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಅವರು ಚಲಾಯಿಸುತ್ತಿದ್ದ ಕಾರು ತಿರುವಿನಲ್ಲಿ ನಿಯಂತ್ರಣ ತಪ್ಪಿದ್ದು ತಡೆಗೋಡೆ ಇಲ್ಲದ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸದ್ಯ ಸಣ್ಣಪುಟ್ಟ ಗಾಯದಿಂದ ಕಾರು ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ವರ್ಷ ಇದೇ ಸ್ಥಳದಲ್ಲಿ ಕಾರು ಹೊಳೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಸೇತುವೆಗೆ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರು ಎಷ್ಟೇ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ದುರ್ಘಟನೆ ನಡೆದರೂ ಆಡಳಿತ ಮಂಡಳಿ, ಜನಪ್ರತಿನಿಧಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ.
ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಬೆಳಗಾವಿ, ಡಿ.29: ಎರಡು ಕಾರುಗಳ ನಡುವೆ ಡಿಕ್ಕಿ(Accident)ಯಾದ ಹಿನ್ನಲೆ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailhongal) ತಾಲೂಕಿನ ಇಂಚಲ ಬಳಿ ನಡೆದಿದೆ.
ಮಂಗಲಾ ಭರಮನಾಯ್ಕರ್(50) ಹಾಗೂ ಚಾಲಕ ಶ್ರೀಶೈಲ(40) ಸಾವನ್ನಪ್ಪಿದ ರ್ದುದೈವಿಗಳು. ಇನ್ನುಳಿದಂತೆ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.