ಬಂಟ್ವಾಳ: ಮನೆಯ ಕಾಂಪೌಂಡ್ ನಿರ್ಮಾಣದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿಕೊಂಡ ಇಬ್ಬರು ಕಾರ್ಮಿಕರು..!
ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ.
ಇಲ್ಲಿನ ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಸುತ್ತಿದ್ದ ವೇಳೆ ಮೇಲಿನಗುಡ್ಡ ಜರಿದು ಬಿದ್ದಿದ್ದು, ಮಣ್ಣಿನೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡ ಘಟನೆ ನಡೆದಿದೆ.
ಕಾಂಪೌಂಡ್ ನಿರ್ಮಾಣಕ್ಕೆ ಮಣ್ಣು ಅಗೆದು ಪಾಯ ಮಾಡುತ್ತಿದ್ದ ವೇಳೆ ಗುಡ್ಡ ಜರಿದು ಮಣ್ಣಿನೊಳಗೆ ರಾಜೇಶ್ ನಾಯ್ಕ್ ಬಾಯಿಲ ಹಾಗೂ ಉಮೇಶ್ ನಾಯ್ಕ್ ನೆಲ್ಲಿ ಎಂಬ ಕಾರ್ಮಿಕರು ಸಿಲುಕಿಕೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಇಬ್ಬರನ್ನು ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್, ಕಂದಾಯ ಅಧಿಕಾರಿ ವಿಜಯ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪ್ಪಿನಂಗಡಿ : ಹೃದಯಾಘಾತದಿಂದ ಲಾರಿಯೊಳಗೆ ಮೃತಪಟ್ಟ ಚಾಲಕ : 2 ದಿನಗಳ ಬಳಿಕ ಬೆಳಕಿಗೆ ಬಂದ ಪ್ರಕರಣ
ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.
ಲಾರಿಯ ಕ್ಯಾಬಿನ್ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.