Rain Alert : ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಈ ವಾರ ಸಾಧಾರಣ ಮಳೆ ಸಾಧ್ಯತೆ...!
ಪ್ರತಿ ವರ್ಷದಂತೆ ಅಲ್ಲದಿದ್ದರೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚಳಿ ಶುರುವಾಗಿದೆ. ಹಲವು ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣವೂ ಇದೆ. ಹೊಸ ವರ್ಷದ ಮೊದಲ ವಾರದಲ್ಲೇ ವರುಣದೇವನ ಆಗಮನವಾಗುವ ಹೆಚ್ಚಿನ ಸಾಧ್ಯತೆ ಇದೆ. ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಈಗ ಶುಭ್ರ ಆಕಾಶವಿದೆ, ಬೆಳಗಿನ ಜಾವ ಮೈಕೊರೆವ ಚಳಿ ಜತೆಗೆ ಕೆಲವೆಡೆ ಮಂಜು ಮುಸುಕಿದ ವಾತಾವರಣವೂ ಇತ್ತು. ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು: 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು: 31ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿವಮೊಗ್ಗ: 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿ: 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ. ಮೈಸೂರು: 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ
ಮಂಡ್ಯ: 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಡಿಕೇರಿ: 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಮನಗರ: 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನ: 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಾಮರಾಜನಗರ: 31ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಬಳ್ಳಾಪುರ: 27ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.