ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ;ಮಧ್ಯದ ಮೇಲೆ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು..!
ಬೆಂಗಳೂರು, ಜ.02: ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ(Liquor Price) ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ(RB Thimmapur) ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.
ಮಧ್ಯದ ಮೇಲೆ ದರ ಏರಿಕೆ – ಸ್ಪಷ್ಟನೆ ನೀಡಿದ ಸಚಿವರು
ಈ ಹಿಂದೆ 17% ರಷ್ಟು ಎಲ್ಲಾ ಮಾದರಿಯ ಮಧ್ಯದ ಮೇಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯಾದ್ಯಂತ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ ಎನ್ನಲಾಗಿತ್ತು. ಇದಕ್ಕೆ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.
ಇನ್ನು ಇದೇ ವೇಳೆ ಜನವರಿ 22ರಂದು ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರ ‘ರಾಮನ ಗುಡಿ ಕಟ್ಟಿದರೆ ಸಾಲದು, ರಾಮ ರಾಜ್ಯ ಆಗಬೇಕು. ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು, ಧರ್ಮ, ದೇವರು ವಿಚಾರದಲ್ಲಿ ನಮಗೆ ನಂಬಿಕೆ ಇರಬೇಕು. ಆದರೆ, ನನ್ನದೇ ಧರ್ಮ, ನಾನೇ ಸ್ಥಾಪನೆ ಮಾಡುತ್ತೇನೆ ಎನ್ನುವುದು ನಾನೇ ದೇವಸ್ಥಾನ ಕಟ್ಟುಬಿಡುತ್ತೇನೆ ಎನ್ನುವುದು ಸರಿಯಲ್ಲ, ಇಂತಹ ವಿಚಾರಗಳಿಂದ ದೇಶ ದಿವಾಳಿಯಾಗಲಿದೆ ಎಂದಿದ್ದಾರೆ.
Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್ಗಳು
ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ್ದ ಬಜೆಟ್ನಲ್ಲಿ ಮದ್ಯದ ಮೇಲೆ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಳ (Excise Duty Hike) ಮಾಡಿದ್ದು, ಬಿಯರ್ ಮೇಲೆ ಶೇ 10ರಷ್ಟು ಹೆಚ್ಚಿಸಿದ್ದರು. ಇದು ಗುರುವಾರ ಜಾರಿಗೆ ಬಂದೆ. ಸುಂಕ ಹೆಚ್ಚಳದ ನಂತರ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲೀಕರು ಮದ್ಯದ ಬೆಲೆ ಪರಿಷ್ಕರಿಸಲು (Liquor prices) ಮುಂದಾಗಿದ್ದಾರೆ. ಆಲ್ಕೋಹಾಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳಕ್ಕೆ ಸಂಬಂಧಿಸಿ ಜುಲೈ 18ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ನಂತರ ಬಾರ್ ಹಾಗೂ ಪಬ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರತದಲ್ಲಿ ತಯಾರಾಗುವ ವಿದೇಶಿ ಬ್ರಾಂಡ್ ಮದ್ಯಕ್ಕೆ (IMFL) ಸಂಬಂಧಿಸಿದ ಎಲ್ಲಾ 18 ಸ್ಲ್ಯಾಬ್ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 20 ರಷ್ಟು ಹೆಚ್ಚಿಸುವುದಾಗಿ ಜುಲೈ 7ರಂದು ಮಂಡಿಸಿದ್ದ ಬಜೆಟ್ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದರು. ಇದಲ್ಲದೇ ರಾಜ್ಯದಲ್ಲಿ ಬಿಯರ್ ಮೇಲಿನ ಸುಂಕ ಶೇ 10ರಷ್ಟು ಏರಿಕೆ ಮಾಡುವುದಾಗಿ ಘೋಷಿಸಿದ್ದರು.
ಹೆಚ್ಚುವರಿ ಅಬಕಾರಿ ಸುಂಕದ ಹೆಚ್ಚಳದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾರ್ಚ್ 31, 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ 36,000 ಕೋಟಿ ರೂ. ಅಬಕಾರಿ ಸುಂಕ ಸಂಗ್ರಹಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವು ಅವುಗಳನ್ನು ಜಾರಿಗೆ ತರಲು ಹೊರಟಿರುವುದರಿಂದ ಅದಕ್ಕಾಗಿ ಆದಾಯ ಕ್ರೂಡೀಕರಣಕ್ಕೆ ಮದ್ಯದ ಮೇಲಿನ ಅಬಕಾರಿ ಸುಂಕ ಹಚ್ಚಳದ ಮೊರೆ ಹೋಗಿದೆ.
ಬಜೆಟ್ ಮಂಡನೆಗೂ ಮುನ್ನವೇ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿರುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.