ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಎಣ್ಣೆಯ ಅಮಲಿನಲ್ಲಿ ಸ್ನೇಹಿತನ ಮೂಗು ಕಚ್ಚಿ ತುಂಡರಿಸಿದ ಆರೋಪಿ ಅರೆಸ್ಟ್..!

Twitter
Facebook
LinkedIn
WhatsApp
ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಎಣ್ಣೆಯ ಅಮಲಿನಲ್ಲಿ ಸ್ನೇಹಿತನ ಮೂಗು ಕಚ್ಚಿ ತುಂಡರಿಸಿದ ಆರೋಪಿ ಅರೆಸ್ಟ್..!

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಎಣ್ಣೆಯ ಅಮಲಿನಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿ ಮೂಗು ಕಚ್ಚಿ ತುಂಡರಿಸಿದ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಕೇಶ್‌ (21 ವೇಣೂರು ಪೊಲೀಸರಿಂದ ಬಂಧಿಸ್ಪಟ್ಟ ಆರೋಪಿಯಾಗಿದ್ದಾನೆ. ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದ ರಾಕೇಶ್ ಪ್ರಸ್ತುತ ಬೆಳ್ತಂಗಡಿ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್‌ (28)ನ ಮೂಗು ಕಚ್ಚಿ ಗಂಭೀರ ಗಾಯಗೊಳಿಸಿದ್ದ. 

ಘಟನೆಯಿಂದ ಗಾಯಗೊಂಡ ದೀಕ್ಷಿತ್‌ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ದೀಕ್ಷಿತ್‌ ನೀಡಿದ ದೂರಿನಂತೆ ಆರೋಪಿ ರಾಕೇಶ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಣೂರು ಉಪನಿರೀಕ್ಷಕ ಶ್ರೀಶೈಲಾ ನೇತೃತ್ವದ ತಂಡ ಜ. 2ರಂದು ಆರೋಪಿ ರಾಕೇಶ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೈಮೇಲೆ ದ್ವೆವ್ವದ ಕಾಟ, 3 ತಿಂಗಳಿಂದ ದಿಗ್ಬಂಧನದಲ್ಲಿ ಮಹಿಳೆ ಅಧಿಕಾರಿಗಳಿಂದ ಬಂಧಮುಕ್ತ..!

ಪುತ್ತೂರು: ಮೈಮೇಲೆ ದ್ವೆವ್ವ ಬರುತ್ತೆ ಅಂತ ಕಳೆದ ಮೂರು ತಿಂಗಳಿಂದ ಕೊಠಡಿಯಲ್ಲಿ ಕೂಡಿಹಾಕಿದ ಮಹಿಳೆಯನ್ನು ಅಧಿಕಾರಿಗಳು ಬಂಧಮುಕ್ತಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.

ತಾಲೂಕಿನ ಕೆಮ್ಮಿಂಜೆ ಗ್ರಾಮದ ಕಾರೆಜ ಎಂಬಲ್ಲಿ ಈ ಘಟನೆ ನಡೆದಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ದಿಗ್ಭಂಧನ ಮುಕ್ತಗೊಳಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೃತ್ತಿಯಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಸ್ಥಳೀಯ ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾಲತಾ ಅವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಲಾಗಿತ್ತು. ಈ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ದಿಗ್ಬಂಧನದಿಂದ ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೃತ್ತಿಯಲ್ಲು ಅಡುಗೆ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್ ಅವರು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ನಿವಾಸಿ ಆಶಾಲತಾರನ್ನು ವಿವಾಹವಾಗಿದ್ದರು. ಅವರಿಗೆ ಈಗ 9 ವರ್ಷ ಪ್ರಾಯದ ಪುತ್ರಿ ಇದ್ದಾಳೆ. ಆಶಾಲತಾ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನಲೆಯಲ್ಲಿ ಆಕೆಯನ್ನು ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೇಟ್ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು.ಸುದೀರ್ಘ ಅವಧಿಯಲ್ಲಿ ಸ್ನಾನ ಮಾಡಿಸದಿರುವುದರಿಂದ ಸ್ವಚ್ಚತೆಯ ಸಮಸ್ಯೆಯ ಪರಿಣಾಮ ಎದುರಾಗಿತ್ತು ಮಾತ್ರವಲ್ಲದೆ ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ಲಭಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist