ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹಲವು ಕ್ಷೇತ್ರಗಳಲ್ಲಿ ಹೊಸ ಮುಖ. ತುಮಕೂರಿಗೆ ನಿಕೇತ್ ರಾಜ್, ಮಂಡ್ಯಕ್ಕೆ ರಮ್ಯ?
ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಾಂಗ್ರೆಸ್ ಬಹಳಷ್ಟು ಕಸರತ್ತು ನಡೆಸುತ್ತಿದೆ. ಈ ನಡುವೆ ಹಲವಾರು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಹಾಕುವ ಸಾಧ್ಯತೆ ಇದೆ ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯ ರವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೊದಲು ಅವರ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದರು.
ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭಿವೃದ್ಧಿ ಚಿಂತನೆಗಳ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿ ಮಾಡಿರುವ ನಿಕೇತ್ ರಾಜ್ ಮೌರ್ಯ ಅಭ್ಯರ್ಥಿಯಾಗುವುದು ಬಹುತೇಕ ಪಕ್ಕ ಎನ್ನಲಾಗುತ್ತಿದೆ. ಹೈಕಮಾಂಡ್ ಮೂಲಗಳ ಪ್ರಕಾರ ನಿಕೇತ್ ರಾಜ್ ರವರ ಹೆಸರು ಹೈಕಮಾಂಡ್ ವಲಯದಲ್ಲಿ ಗಂಭೀರವಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.
ಈ ನಡುವೆ ಕೆಲವು ಲೋಕಸಭಾ ಕ್ಷೇತ್ರದಲ್ಲಿ ಸಚಿವರುಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಸಚಿವರುಗಳು ಹಿಂದೇಟು ಹಾಕುತ್ತಿರುವುದು ಹೊಸ ಬೆಳವಣಿಗೆಯಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಒಂದು ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನು ತರಿಸಿ ಪರಿಶೀಲಿಸಿದ್ದು, ಮಂಡ್ಯ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಹಿರಿಯ ಸಚಿವರಿಗೆ ಹಾಗೂ ಪಕ್ಷದ ನಾಯಕರಿಗೆ ಉಸ್ತುವಾರಿಯನ್ನು ನೀಡಿದ್ದು ಅವರು ಒಂದು ಹಂತದ ವರದಿಯ ಆಧಾರದ ಮೇಲೆ ಕೆಪಿಸಿಸಿ ಹೈಕಮಾಂಡ್ಡಿಗೆ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಒಬ್ಬ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು: ಸಿಎಂ
ಬೆಂಗಳೂರು: ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಕೆಂಡಾಮಂಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜೈಲಲ್ಲಿ ಹಿಂದೂಗಳೇ ಹೆಚ್ಚಿದ್ದಾರೆ. ಅವರ ಪರವಾಗಿ ಬಿಜೆಪಿ (BJP) ಹೋರಾಟ ನಡೆಸುತ್ತಾ? ಎಂದು ಸಿಎಂ ಸವಾಲ್ ಹಾಕಿದ್ದಾರೆ. ಅಲ್ಲದೇ ಈ ಹಿಂದೆ ಬಿಜೆಪಿ ಅವಧಿಯಲ್ಲೇ ಯಡಿಯೂರಪ್ಪರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಇದು ಆಗಿನ ಸರ್ಕಾರದ ಹಿಂದು ವಿರೋಧಿಯೇ ಎಂದು ಪ್ರಶ್ನಿಸಿದ್ದಾರೆ. ಹಾಗೆ ನೋಡಿದ್ರೆ ಬಿಎಸ್‍ವೈಗಿಂತ ದೊಡ್ಡ ಹಿಂದೂ ಯಾರಿದ್ದಾರೆ? ಅವರಿಗಿಂತ ದೊಡ್ಡ ರಾಮ ಭಕ್ತ ಯಾರಿದ್ದಾರೆ? ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ.
ತಪ್ಪು ಮಾಡಿದವರಿಗೆ ಶಿಕ್ಷೆ ಆಗಬಾರದು ಎಂದು @BJP4Karnataka ಪ್ರತಿಭಟನೆ ನಡೆಸುತ್ತಿದೆಯೇ? ಇನ್ಮುಂದೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಾರದ?
— Siddaramaiah (@siddaramaiah) January 3, 2024
ಕಾನೂನು ಏನು ಹೇಳುತ್ತದೆ ಅದರಂತೆ ಕೆಲಸ ಮಾಡುತ್ತೇವೆ.#BjpSupportsCriminals pic.twitter.com/kFRzJX758S
ಇನ್ನು, ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಂಧಿಸಿದ 36 ಆರೋಪಿಗಳ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಅದ್ರಲ್ಲಿ ಶ್ರೀಕಾಂತ ಪೂಜಾರಿಯನ್ನು ದೊಂಬಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ ಶ್ರೀಕಾಂತ್ ಕರಸೇವಕ ಎಂಬ ಕಾರಣಕ್ಕೆ ಬಂಧಿಸಿಲ್ಲ, ಟಾರ್ಗೆಟ್ ಮಾಡಿಲ್ಲ, ಬಿಜೆಪಿ ಆರೋಪಗಳೆಲ್ಲಾ ಸುಳ್ಳು ಎಂಬ ಸಂದೇಶವನ್ನು ಸಿಎಂ ನೀಡಿದ್ದಾರೆ.
ಈ ಮಧ್ಯೆ ಶ್ರೀಕಾಂತ್ ಪೂಜಾರಿ ಬಂಧನವನ್ನು ಗೃಹಮಂತ್ರಿಯೂ ಸಮರ್ಥಿಸಿದ್ದಾರೆ. ಆದರೆ ಶ್ರೀಕಾಂತ್ ಬಂಧನ ಸಮರ್ಥಿಸುವ ಭರಾಟೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು-ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಅಮಾಯಕರೆಂಬ ಸರ್ಟಿಫಿಕೇಟ್ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.