ನಾನು ಕರಸೇವಕ, ನನ್ನನ್ನೂ ಬಂಧಿಸಿ; ಪ್ಲೆಕಾರ್ಡ್ ಹಿಡಿದು ಠಾಣೆಯೆದುರು ಪ್ರತಿಭಟಿಸಿದ ಶಾಸಕ ಸುನೀಲ್ ಕುಮಾರ್ ಅರೆಸ್ಟ್..!
ಬೆಂಗಳೂರು : ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದಕ್ಕೆ ಹೋರಾಟ ತೀವ್ರಗೊಳ್ಳುತ್ತಿದೆ.
ಇದೇ ಸಂಧರ್ಭ ಕರಸೇವಕನ ಬಂಧನ ಖಂಡಿಸಿ ಠಾಣೆಯೆದುರು ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರನ್ನು ನಗರದ ಸದಾಶಿವ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುನೀಲ್ ಕುಮಾರ್ ಇಂದು ಬೆಳಗ್ಗೆ ‘ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂಬ ಪ್ಲೆಕಾರ್ಡ್ ಹಿಡಿದು ಸದಾಶಿವ ನಗರ ಪೊಲೀಸ್ ಠಾಣೆ ಎದುರು ಬೆಳಗ್ಗೆ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದರು. ಮಾಜಿ ಸಚಿವರೂ ಆಗಿರುವ ಸುನೀಲ್ ಕುಮಾರ್ ಅವರು ಈ ಸಂದರ್ಭ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಉಡುಪಿ – ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ನಿಧನ
ಉಡುಪಿ ಜನವರಿ 04: ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲೀಕರಾಗಿದ್ದ ಸುಧಾಕರ ಶೆಟ್ಟಿ ಹೋಟೆಲ್ ಉದ್ಯಮದ ಜತೆಗೆ ರಾಜಕೀಯವಾಗಿಯೂ ಬೆಳೆದಿದ್ದರು. 2009ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 1999, 2004 ಹಾಗೂ 2013ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.
ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.