40 ರೂಪಾಯಿ ಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್ ಮಾರಾಟ ; ಯುವಕ ಬಂಧನ.!
ದರ್ಶನ್ ಅಭಿನಯದ ʻಕಾಟೇರʼ ಸಿನಿಮಾ (Kaatera Movie) 100 ಕೋಟಿ ರೂ. ಕ್ಲಬ್ ಸೇರಿದೆ. ಇದರ ಬೆನ್ನಲ್ಲೇ ಸಿನಿಮಾಗೆ ಪೈರಸಿ ಕಾಟ ಕೂಡ ಹೆಚ್ಚಾಗಿದೆ.
ರಾಯಚೂರಿನ ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಯುವಕನೊಬ್ಬ 40 ರೂ.ಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ.
ಕೆಲವು ಕಿಡಿಗೇಡಿಗಳು ಈ ಸಿನಿಮಾದ ಪೈರಸಿ ಕಾಪಿಯನ್ನು ಟಿಲಿಗ್ರಾಂ ಮೂಲಕ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ. ರಾಯಚೂರಿನಲ್ಲಿ ‘ಕಾಟೇರ’ ಚಿತ್ರದ ಪೈರಸಿ ಲಿಂಕ್ ಮಾರಾಟ ಮಾಡುತ್ತಿದ್ದ ಮೌನೇಶ್ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಉಪೇಂದ್ರ ಎಂಬಾತನಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಕಾಪಿ ರೈಟ್ ಆ್ಯಕ್ಟ್ ಮತ್ತು ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್. ಕಾಲಿವುಡ್ ಹಾಗೂ ಟಾಲಿವುನಲ್ಲಿ ಈ ಸಿನಿಮಾ ಚರ್ಚೆ ಜೋರಾಗಿದೆ. ಸಿನಿಮಾ ಮುಂದಿನ ದಿನಗಳಲ್ಲಿ ಡಬ್ ಆಗಲಿದೆ ಎನ್ನುತ್ತಿದೆ ವರದಿ.
ದರ್ಶನ್ ಅವರಿಗೆ ಈ ಹಿಂದೆ ತರುಣ್ ಸುಧೀರ್ ʼರಾಬರ್ಟ್ʼ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ದರ್ಶನ್ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದಾರೆ.
ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಕಾಟೇರ
ದರ್ಶನ್ ನಟನೆಯ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದು, ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ. ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಲ್ಲೂ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.