ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಲ್ಕಿಸ್ ಬಾನು ಪ್ರಕರಣ; ಗುಜರಾತ್ ಸರ್ಕಾರದ ನಿರ್ಧಾರ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ - ಮತ್ತೆ 11 ಅಪರಾಧಿಗಳು ಜೈಲಿಗೆ..!

Twitter
Facebook
LinkedIn
WhatsApp
ಬಿಲ್ಕಿಸ್ ಬಾನು ಪ್ರಕರಣ; ಗುಜರಾತ್ ಸರ್ಕಾರದ ನಿರ್ಧಾರ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ - ಮತ್ತೆ 11 ಅಪರಾಧಿಗಳು ಜೈಲಿಗೆ..!

ದೆಹಲಿ, ಜ.8: ಬಿಲ್ಕಿಸ್ ಬಾನು (Bilkis Bano ) ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಸುಪ್ರೀಂ ಹೇಳಿದೆ. ಇದರ ಜತೆಗೆ ಅಪರಾಧಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ಆದೇಶವನ್ನು ನೀಡಿದ್ದಾರೆ.

ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ನಿರ್ಧಾರವು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ. ಈ ಬಿಡುಗಡೆ ಆದೇಶದಲ್ಲಿ ಸಾಮರ್ಥ್ಯದ ಕೊರತೆ ಇದೆ ಎಂದು ಕೋರ್ಟ್​​​ ಹೇಳಿದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುವುದಾಗಿ ಹೇಳಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾವರ್ವಜನಿಕರ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಅಪರಾಧಿಗಳ ಬಿಡುಗಡೆ ವೇಳೆ ಅವರಿಗೆ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಅಪರಾಧಿಗಳ ಜತೆಗೆ ಬಿಜೆಪಿ ಸಂಸದರು, ಶಾಸಕರು, ವೇದಿಕೆಯನ್ನು ಹಂಚಿಕೊಂಡಿದ್ದರು. ಈ ಸುದ್ದಿಯು ಭಾರೀ ಸುದ್ದಿ ಮಾಡಿತ್ತು. ಇನ್ನು ಈ ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು, ಇದನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತರಲಾಯಿತು.

India-Maldives Row: ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ವಿವಾದಾತ್ಮಕ ಹೇಳಿಕೆಯಿಂದ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ಭಾರತದ ವಿದೇಶಾಂಗ ಸಚಿವಾಲಯ ಮಾಲ್ಡೀವ್ಸ್‌ನ ರಾಯಭಾರಿಗೆ ಸಮನ್ಸ್‌ ನೀಡಿದೆ. ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್ ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಳ ಕುರಿತು ಸಚಿವರ ಕಾಮೆಂಟ್‌ಗಳ ಬಗ್ಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮಾಲ್ಡೀವ್ಸ್ ಸರ್ಕಾರ ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿಕೆ ನೀಡಿದೆ. ಚಿವರ ಅವಹೇಳನಕಾರಿ ಹೇಳಿಕೆಗಳ ನಂತರ, ಮಾಲ್ಡೀವ್ಸ್ ವಿರುದ್ಧ ಭಾರತದಲ್ಲಿ ವಿರೋಧ ಪ್ರಾರಂಭವಾಯಿತು. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಲ್ಡೀವ್ಸ್ ವಿರುದ್ಧ ಪ್ರತಿಭಟನೆ ನಡೆಸಿದರು.

#BoycottMaldives ಭಾನುವಾರದಂದು ಭಾರತದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಅನೇಕ ಜನರು ತಮ್ಮ ರದ್ದಾದ ವಿಮಾನ ಪ್ರಯಾಣ ಮತ್ತು ಹೋಟೆಲ್ ಬುಕಿಂಗ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸೋಮವಾರ, ಭಾರತೀಯ ಟ್ರಾವೆಲ್ ದೈತ್ಯ EaseMyTrip ಮಾಲ್ಡೀವ್ಸ್‌ಗೆ ಎಲ್ಲಾ ವಿಮಾನಗಳ ಬುಕಿಂಗ್ ರದ್ದುಗೊಳಿಸಿದೆ. ಈ ವಿವಾದವು ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತವನ್ನು ಉಂಟುಮಾಡಬಹುದು ಎಂದು ಹೇಳಲಾಗುತ್ತಿದೆ.

ಮೂವರು ಮಂತ್ರಿಗಳಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜಿದ್ ಅವರನ್ನು ಅಮಾನತುಗೊಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist