ಮಂಗಳವಾರ, ಮಾರ್ಚ್ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

Twitter
Facebook
LinkedIn
WhatsApp
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.

ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿಂದ ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿತ್ತು.

ಅಧಿಕಾರಿಗಳ ತಂಡದ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು (Students) ಶಿಕ್ಷಕನ ಕರಾಳ ಮುಖ ಅನಾವರಣ ಮಾಡಿದ್ರು. ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಕಣ್ಣೀರಾಕುತ್ತಲೇ ಅಧಿಕಾರಿಗಳ ಮುಂದೆ ಎಲ್ಲಾ ವಿಚಾರವನ್ನ ವಿದ್ಯಾರ್ಥಿನಿಯರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ರು. ಪರಿಶೀಲನೆ ವರದಿಯ ಆಧಾರದ ಮೇಲೆ ಯಾದಗಿರಿ ಡಿಡಿಪಿಐ ಮಂಜುನಾಥ ಎಚ್.ಟಿ ಅವರಿಂದ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.

ಅರಣ್ಯಾಧಿಕಾರಿ ಮನೆಯಲ್ಲಿ ಕಳ್ಳತನ – ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಹಾಸನ: ಇಲ್ಲಿನ (Hassan) ಜಯನಗರದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ (Forest Officer) ಮನೆಯ ಬೀಗ ಒಡೆದು 2 ಲಕ್ಷ ರೂ. ನಗದು ಹಾಗೂ 6.26 ಲಕ್ಷ ರೂ. ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ಅರಣ್ಯಾಧಿಕಾರಿ ಗಿರೀಶ್‍ನಾಯಕ್ ಜ.7ರ ಬೆಳಗ್ಗೆ 6:30ರ ಸಮಯದಲ್ಲಿ ಮನೆ ಲಾಕ್ ಮಾಡಿಕೊಂಡು ಹೆಂಡತಿ ಹಾಗೂ ಮಕ್ಕಳೊಂದಿಗೆ ಕಾರ್ಕಳದ ಅಣ್ಣನ ಮಗನ ಮದುವೆಗೆ ಹೋಗಿದ್ದರು. ಜ.10 ರಂದು ಬೆಳಗ್ಗೆ ವಾಪಸ್ ಬಂದು ನೋಡಿದಾಗ ಮನೆಯ ಬಾಗಿಲನ್ನು ಒಡೆದಿರುವುದು ಕಂಡುಬಂದಿದೆ. ಒಳಗೆ ಹೋಗಿ ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಬೆಡ್ ರೂಮ್‍ನ ವಾರ್ಡ್ ರೂಫ್‍ನ ಬಾಗಿಲು ಮುರಿದು ಅದರಲ್ಲಿದ್ದ ನಾಲ್ಕೂವರೆ ಗ್ರಾಂನ ಚಿನ್ನದ ಕಪ್ಪು ಹರಳಿನ ಓಲೆ (ಅಂದಾಜು ಬೆಲೆ 20,000 ರೂ.), ಮೂರೂವರೆ ಗ್ರಾಂನ ಚಿನ್ನದ ಮುತ್ತಿನ ಓಲೆ (18,000 ರೂ.), 6 ಗ್ರಾಂನ ಚಿನ್ನದ ಬಿಳಿಕಲ್ಲಿನ ಓಲೆ (26,000 ರೂ.), 5 ಗ್ರಾಂನ ಹವಳ ಮತ್ತು ಜೇಡದ ಓಲೆ (20,000 ರೂ.), 15 ಗ್ರಾಂನ ಚಿನ್ನದ ಬ್ರೇಸ್ಲೆಟ್ (75,000 ರೂ.), 25 ಗ್ರಾಂನ ಮುತ್ತಿನ ಚಿನ್ನದ ಸರ (1.20 ಲಕ್ಷ ರೂ.), 6 ಗ್ರಾಂನ ಚಿನ್ನದ 2 ಉಂಗುರ (30,000 ರೂ.), 15 ಗ್ರಾಂನ ಚಿನ್ನದ 9 ಗುಂಡುಗಳು (65,000 ರೂ.), 32 ಗ್ರಾಂನ 2 ಚಿನ್ನದ ಕತ್ತಿನ ಚೈನ್ (1.76 ಲಕ್ಷ ರೂ.), 6 ಗ್ರಾಂನ ಬಿಳಿಕಲ್ಲು ಉಂಗುರ (25,000 ರೂ.) ಎಂದು ಅಂದಾಜಿಸಲಾಗಿದ್ದು, ಒಟ್ಟು ಬೆಲೆ 5.75 ಲಕ್ಷ ರೂ. ಎನ್ನಲಾಗಿದೆ.

ದೇವರ ಮನೆಯಲ್ಲಿದ್ದ 180 ಗ್ರಾಂ.ನ ಒಂದು ಬೆಳ್ಳಿ ತಂಬಿಗೆ (9000 ರೂ.), 35 ಗ್ರಾಂನ ಗಣಪತಿ ಹಾಗೂ ಲಕ್ಷ್ಮಿ ವಿಗ್ರಹ (1,600 ರೂ), 25 ಗ್ರಾಂನ ಬೆಳ್ಳಿ ಲೋಟ (1,200 ರೂ.), 200 ಗ್ರಾಂ ನ ಬೆಳ್ಳಿ ತಟ್ಟೆ (11,600 ರೂ.), 48 ಗ್ರಾಂನ ಒಂದು ತೀರ್ಥದ ಬಟ್ಟಲು (7,000), 50 ಗ್ರಾಂನ ಕಾಮಧೇನು ವಿಗ್ರಹ (18,000 ರೂ.) 50 ಗ್ರಾಂನ ಇತರೆ ಬೆಳ್ಳಿ ಸಾಮಾನುಗಳು (3,000) ಸೇರಿ 51,400 ರೂ ಎಂದು ಅಂದಾಜಿಸಲಾಗಿದೆ. ಅಲ್ಲದೇ ಎರಡು ಲಕ್ಷ ರೂ. ನಗದು ಸೇರಿ ಒಟ್ಟು 8,26,400 ರೂಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ಈ ಸಂಬಂಧ ಬಡಾವಣೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist