ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವನಿಧಿ ಯೋಜನೆಗೆ ಏನೆಲ್ಲಾ ದಾಖಲೆಗಳು ಬೇಕು? ಷರತ್ತುಗಳೇನು...!

Twitter
Facebook
LinkedIn
WhatsApp
ಯುವನಿಧಿ ಯೋಜನೆಗೆ ಏನೆಲ್ಲಾ ದಾಖಲೆಗಳು ಬೇಕು? ಷರತ್ತುಗಳೇನು...!

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.

ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು, ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಯುವ ನಿಧಿ ಯೋಜನೆ ಎಂದರೇನು? : ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗೆ ಉದ್ಯೋಗ ಸಿಗುವವರೆಗೆ (ಯಾವುದು ಮೊದಲೋ) ನಿರುದ್ಯೋಗ ಭತ್ಯೆ ಒದಗಿಸುವ ಗುರಿಯನ್ನು ಹೊಂದಿದೆ. ಯುವ ನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಆದವರಿಗೆ 1,500 ರೂ. ಒದಗಿಸುತ್ತದೆ.

ಯುವ ನಿಧಿ ಯೋಜನೆಗೆ ಅರ್ಹತೆ: ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು. ಫಲಾನುಭವಿಯು 2023 ರಲ್ಲಿ ಪದವಿ/ಡಿಪ್ಲೊಮಾ ಪಡೆದಿರಬೇಕು ಮತ್ತು ಕನಿಷ್ಠ 180 ದಿನಗಳವರೆಗೆ ಯಾವುದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಇದ್ದಿರಬಾರದು.

ಯುವ ನಿಧಿ ನೋಂದಣಿಗೆ ಅಗತ್ಯವಿರುವ ದಾಖಲೆಗಳು: ಎಸ್​ಎಸ್​ಎಕ್​ಸಿ ಅಂಕ ಪಟ್ಟಿ, ಪದವಿ/ಡಿಪ್ಲೋಮಾ ಪ್ರಮಾಣಪತ್ರ. ಎಸ್‌ಎಸ್‌ಎಲ್‌ಸಿ ನಂತರ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಡಿಪ್ಲೊಮಾ ಪ್ರಮಾಣಪತ್ರಗಳೊಂದಿಗೆ 8, 9 ಮತ್ತು 10 ನೇ ಅಂಕಪಟ್ಟಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮತ್ತು ಆಧಾರ್-ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಯುವ ನಿಧಿ ನೋಂದಣಿ ಹೇಗೆ?: ಅರ್ಹ ಅಭ್ಯರ್ಥಿಗಳು ಯುವ ನಿಧಿ ಯೋಜನೆಗಾಗಿ ಸೇವಾಸಿಂಧು ಪೋರ್ಟಲ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಪ್ರತಿ ತಿಂಗಳ 25 ನೇ ತಾರೀಖಿನ ಮೊದಲು ನೋಂದಾಯಿಸುವ ಅಭ್ಯರ್ಥಿಗಳು ಆ ನಿರ್ದಿಷ್ಟ ತಿಂಗಳಿಗೆ ಹಣವನ್ನು ಪಡೆಯುತ್ತಾರೆ ಮತ್ತು 25 ರ ನಂತರ ಅರ್ಜಿ ಸಲ್ಲಿಸುವವರನ್ನು ಮುಂದಿನ ತಿಂಗಳಿಗೆ ಪರಿಗಣಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist