ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಸ್ ನಿಲ್ದಾಣದ ಬಳಿ ನಿಂತಿದ್ದ ಯುವತಿ ಮೇಲೆ ಹರಿದ ಲಾರಿ, ಪಿಯು ವಿದ್ಯಾರ್ಥಿನಿ ಸಾವು!

Twitter
Facebook
LinkedIn
WhatsApp
ಬಸ್ ನಿಲ್ದಾಣದ ಬಳಿ ನಿಂತಿದ್ದ ಯುವತಿ ಮೇಲೆ ಹರಿದ ಲಾರಿ, ಪಿಯು ವಿದ್ಯಾರ್ಥಿನಿ ಸಾವು!

ಚಿತ್ರದುರ್ಗ (ಜ.16): ಬೆಳ್ಳಂಬೆಳಗ್ಗೆ ಕಾಲೇಜಿಗೆ ಹೋಗಲು ಬಸ್ ನಿಲ್ದಾಣದ ಬಳಿ ನಿಂತಿದ್ದ ವಿದ್ಯಾರ್ಥಿ ಮೇಲೆ ಲಾರಿ ಹರಿದಿದ್ದು, ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಿಸಿದ ನಂತರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಚಿತ್ರದುರ್ಗ ಜಿಲ್ಲೆಯ ವಿಜಾಪುರ ಬಳಿ ವಿದ್ಯಾರ್ಥಿಗೆ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಗಾಯಾಳು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಪಿಯು ವಿಧ್ಯಾರ್ಥಿನಿ ಸುಚಿತ್ರಾ (19) ಮೃತ ವಿದ್ಯಾರ್ಥಿನಿ ಆಗಿದ್ದಾಳೆ. ಇದರಿಂದ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 4 ತಡೆದು ಗ್ರಾಮಸ್ಥರ ಧರಣಿ ಮಾಡುತ್ತಿದ್ದಾರೆ. ಸರ್ವೀಸ್ ರಸ್ತೆಗೆ ಬಸ್ ವ್ಯವಸ್ಥೆ ಕಲ್ಪಿಸದ್ದಕ್ಕೆ ಅಪಘಾತ ಸಂಭವಿಸಿದೆ. ಸರ್ವಿಸ್‌ ರಸ್ತೆಗೆ ಬಸ್‌ ಬಂದಿದ್ದರೆ ವಿದ್ಯಾರ್ಥಿನಿಗೆ ಹೀಗೆ ಆಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಇಲಾಖೆಯಿಂದ ಕೂಡಲೇ ಸರ್ವಿಸ್ ರಸ್ತೆ ಮೂಲಕ ವಿಜಾಪುರಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಬೆಳಗ್ಗೆ ಶಾಲೆ- ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ. ಇನ್ನು ಹೆದ್ದಾರಿ ತಡೆದು ಧರಣಿ ಆರಂಭಿಸಿದ್ದರಿಂದ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್ ಉಂಟಾಗಿತ್ತು. ಈ ವೇಳೆ ಧರಣಿನಿರತರನ್ನು ರಸ್ತೆಯಿಂದ ತೆರವುಗೊಳಿಸಲು ಭರಮಸಾಗರ ಠಾಣೆ ಪೊಲೀಸರು ತೀವ್ರ ಹರಸಾಹಸ ಪಡುತ್ತಿದ್ದಾರೆ. ರಸ್ತೆಯಿಂದ ಗ್ರಾಮಸ್ಥರನ್ನು ತೆರವು ಮಾಡಲು ಮುಂದಾದಾಗ ಪೊಲೀಸರ ಜೊತೆಗೇ ಪ್ರತಿಭಟನಾಕಾರರು ವಾಗ್ವಾದ ಮುಂದುವರೆಸಿದ್ದಾರೆ. ಈ ಘಟನೆ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಹಾವೇರಿ ನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ಗ್ಯಾಂಗ್‌ರೇಪ್ ಸಂತ್ರಸ್ತೆಗೆ ಭದ್ರತೆಯಿಲ್ಲ: 
ಹಾವೇರಿಯ ಹಾನಗಲ್‌ ಪುಂಡ ಯುವಕರಿಂದ ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಮಹಿಳೆಯನ್ನು ಕಾರಿನಲ್ಲಿ ಎಳೆದುಕೊಂಡು ಹೋಗಿ 6 ಜರು ಗ್ಯಾಂಗ್‌ ರೇಪ್‌ ಮಾಡಿದ್ದಾರೆ ಎಂದು ಸ್ವತಃ ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಆಪರಾಧಿಗಳು ಸಾಕ್ಷ್ಯ ನಾಶಕ್ಕಾಗಿ ಸಂತ್ರಸ್ತೆಯ ಜೀವಕ್ಕೆ ಅಪಾಯ ಮಾಡುವ ಸಾಧ್ಯತೆಯಿದ್ದರೂ ಪೊಲೀಸರು, ಸಂತ್ರಸ್ತೆಯನ್ನು ಸ್ಥಳ ಮಹಜರಿಗೆ ಹೋಗೋಣ ಎಮದು ಕರೆತಂದು ಒಬ್ಬಂಟಿಯಾಗಿ ಮನೆಗೆ ಬಿಟ್ಟು ಹೋಗಿದ್ದಾರೆ. ಇದ್ಯಾವ ನ್ಯಾಯವೆಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ. 

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಶಿರಸಿಯ ಮಹಿಳೆ ಸ್ವತಃ ತನ್ನ ಮೇಲೆ 6 ಜನ ಮುಸ್ಲಿಂ ಯುವಕರು ಕಾರಿನಲ್ಲಿ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೊಂಡರೂ ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪೊಲೀಸ್‌ ತನಿಖೆಗೂ ಮುನ್ನವೇ ಬಿಜೆಪಿ ನಾಯಕರು ಕಥೆಯನ್ನು ಕಟ್ಟಿ ಆರೋಪಿಗಳೆಂದು ಹೇಳುವುದನ್ನು ನಾವು ನಂಬುವುದಿಲ್ಲ. ಪೊಲೀಸ್‌ ತನಿಖೆ ಮತ್ತು ಸಂಸತ್ರಸ್ತೆಯ ವೈದ್ಯಕೀಯ ಪರೀಕ್ಷೆಯ ಮಾಹಿತಿ ಆಧರಿಸಿ ವರದಿ ಬಂದ ನಂತರ ಈ ಪ್ರಕರಣದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist