ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ..!

Twitter
Facebook
LinkedIn
WhatsApp
ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ..!

ವಿಜಯನಗರ: ಮದುವೆಯಾಗಲು ಯಾರೂ ಹೆಣ್ಣು ಕೊಡುತ್ತಿಲ್ಲ (No one giving bride) ಎಂಬ ಬೇಸರದಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ವಿಜಯನಗರ ಜಿಲ್ಲೆಯಲ್ಲಿ (Vijaya Nagara News) ನಡೆದಿದೆ. ಕಳೆದ ಜನವರಿ 5ರಂದೇ ಆತ ವಿಷ ಸೇವಿಸಿದ್ದು, ಜನವರಿ 15ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಬಿಟ್ಟಿದ್ದಾನೆ. ಆತ ಮೃತಪಟ್ಟ ಬಳಿಕವಷ್ಟೇ ಆತನ ಸಾವಿನ ನಿಜ ಕಾರಣ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ನಿವಾಸಿಯಾಗಿರುವ ಬಿ.ಮಧುಸೂಧನ (26) ಎಂಬಾತನೇ ವಿಷ ಸೇವಿಸಿ ಮೃತಪಟ್ಟ ಯುವಕ. ಮದುವೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂಬ ಬೇಸರದಿಂದ ಇದ್ದ ಆತ ಕೊನೆಗೆ ಜೀವವನ್ನೇ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದ.

ಆತನಿಗೆ ಮದುವೆಗೆ ಹುಡುಗಿ ಸಿಗದೆ ಇರಲು ಅನ್ಯ ಕಾರಣಗಳು ಏನಿದ್ದವೋ ಗೊತ್ತಿಲ್ಲ. ಆದರೆ, ಪ್ರಮುಖವಾಗಿ ಆತನ ತಂದೆ ಮಾನಸಿಕ ಅಸ್ವಸ್ಥರಾಗಿದ್ದು ಒಂದು ಪ್ರಮುಖ ಕಾರಣವಾಗಿದೆ. ಮಾನಸಿಕ ಅಸ್ವಸ್ಥರಾಗಿರುವ ತನ್ನ ತಂದೆಯನ್ನು ನೋಡಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಆತ ಬೇಸರಿಸಿಕೊಂಡಿದ್ದ.

ಈತನನ್ನು ಮೇಲ್ನೋಟಕ್ಕೆ ನೋಡಿದ ಕೆಲವರು ಹುಡುಗಿ ಕೊಡಲು ಒಪ್ಪಿದ್ದರೂ ಬಳಿಕ ಮನೆಗೆ ಬಂದಾಗ ಅಲ್ಲಿ ತಂದೆಯ ಮಾನಸಿಕ ಅಸ್ವಸ್ಥತೆಯನ್ನು ಕಂಡು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಮಧುಸೂದನ ಗ್ರಾಮದ ಹೊರವಲಯದ ವೇಣಿ ಈರಪ್ಪನ ಮಠದ ಬಳಿ ಹೋಗಿ ವಿಷ ಸೇವಿಸಿದ್ದಾನೆ.

ವಿಷಯ ತಿಳಿದ ತಕ್ಷಣ ಆತನನ್ನು ಗುಡೇಕೋಟೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸಾವು ಸಂಭವಿಸಿದೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿಯ ಖಾಸಗಿ ಲಾಡ್ಜ್‌ನಲ್ಲಿ ಟೆಕ್ಕಿ ಆತ್ಮಹತ್ಯೆ

ಮಡಿಕೇರಿ: ಬೆಂಗಳೂರು ಮೂಲದ ಸಾಫ್ಟ್‌ ವೇರ್‌ ಎಂಜಿನಿಯರ್‌ ಒಬ್ಬರು ಮಡಿಕೇರಿಯ ಹೋಟೆಲ್‌ನಲ್ಲಿ ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ. ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.

ಕಳೆದ 2 ದಿನಗಳಿಂದ ಹೊಟೆಲ್‌ನಲ್ಲಿ ತಂಗಿದ್ದ ಸಂದೇಶ್ ಅವರು ಕಿಟಕಿಯ ಸರಳಿಗೆ ಬಟ್ಟೆಯನ್ನೇ ನೇಣಾಗಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೋಣೆಯಲ್ಲಿ ಡೆತ್‌ ನೋಟ್‌ ಕೂಡಾ ಸಿಕ್ಕಿದೆ. ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ, ಎಲ್ಲರಿಗೂ ಗುಡ್‌ ಬೈ, ಯಾರೂ ಬೇಸರ ಮಾಡಬಾರದು ಎಂದು ಬರೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕನ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist