ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ ; ಕಲ್ಲಡ್ಕ ಪ್ರಭಾಕರ್ ಭಟ್ಗೆ ಜಾಮೀನು..!
ಮಂಡ್ಯ, (ಜನವರಿ 17): ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ (kalladka prabhakar bhat) ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ, ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ. ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು. ಇನ್ನು ಇದಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದುರಂದಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಗಳು ವ್ಯಕ್ತವಾಗಿದ್ದವು.
ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಈ ಎಫ್ಐಆರ್ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮಂಡ್ಯ: ಕಿಚ್ಚು ಹಾಯ್ದು ಎಡವಿ ಬಿದ್ದ ರೈತ, ತುಳಿಯದೇ ಆತನ ಮೇಲೆ ಜಿಗಿದು ಹೋದ ಎತ್ತು
ಮಂಡ್ಯ, ಜನವರಿ 16: ರಾಜ್ಯಾದ್ಯಂತ ಸೋಮವಾರ ಮಕರ ಸಂಕ್ರಾಂತಿಯನ್ನು (Sankaranti) ಸಡಗರದಿಂದ ಆಚರಿಸಲಾಯಿತು. ಸಂಕ್ರಮಣದ ನಿಮಿತ್ತ ಕರ್ನಾಟಕದ ಹಲವು ಗ್ರಾಮಗಳಲ್ಲಿ ಎತ್ತುಗಳ ಕಿಚ್ಚು ಹಾಯುವ ಆಚರಣೆ ನಡೆಯಿತು. ಇದೇ ರೀತಿಯ ಆಚರಣೆ ಮಂಡ್ಯ (Mandya) ತಾಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ನಡೆದಿದೆ.
ಬಿದರಕೋಟೆ ಯುವ ರೈತ ಮಹೇಶ್ ಹಬ್ಬದ ನಿಮಿತ್ತ ದ್ಯಾಪಸಂದ್ರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ದ್ಯಾಪಸಂದ್ರದಲ್ಲಿ ನಡೆದ ಎತ್ತುಗಳನ್ನು ಕಿಚ್ಚು ಹಾಯಿಸುವ ಆಚರಣೆಯಲ್ಲಿ ಮಹೇಶ್ ಕೂಡ ಭಾಗಿಯಾಗಿದ್ದರು. ರೈತ ಮಹೇಶ್ ಎತ್ತನ್ನು ಹಿಡಿದುಕೊಂಡು ಕಿಚ್ಚು ಹಾಯ್ದಿದ್ದಾರೆ. ಕಿಚ್ಚು ಹಾಯ್ದ ಬಳಿಕ ಮಹೇಶ್ ಎಡವಿ ಬಿದ್ದಿದ್ದಾರೆ. ಎತ್ತು ಮುಂದೆ ಓಡಿ ಹೋಗಿದೆ. ಬಿದ್ದ ರೈತ ಮಹೇಶ್ ಅವರ ಹಿಂದೆಯೇ ಬರುತ್ತಿದ್ದ ಮತ್ತೊಂದು ಎತ್ತು, ಆತನನ್ನು ತುಳಿಯದೆ ಜಿಗಿದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನುಷ್ಯ ಎಡವಿದರೂ ಪ್ರಾಣಿ ಎಡುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.