ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿ :ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; 8 ಮಂದಿ ಅದೃಷ್ಟವಶಾತ್ ಪಾರು...!

Twitter
Facebook
LinkedIn
WhatsApp
ಮಡಿಕೇರಿ :ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; 8 ಮಂದಿ ಅದೃಷ್ಟವಶಾತ್ ಪಾರು...!

ಮಡಿಕೇರಿ: ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು (Car) ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ (Somavarapete) ತಾಲೂಕಿನ ಯಡೂರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣ ಎಂಬವರು ತಮ್ಮ ತೋಟದಲ್ಲಿ ಕಾಫಿ (Coffee) ಕೊಯ್ದು, ಸಂಜೆ ಯಡೂರು ಮಾರ್ಗವಾಗಿ ಬರುವಾಗ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಯಡೂರು ಕೆರೆಗೆ ಬಿದ್ದಿದೆ. ಕಾರಿನೊಳಗಿದ್ದವರು ಕಿಟಕಿಗಳನ್ನು ಒಡೆದು ಹೊರಬರುವ ಮೂಲಕ ಜೀವ ಉಳಿಸಿಕೊಂಡಿದ್ದಾರೆ.

ಮದಲಾಪುರದ ಜ್ಯೋತಿ, ಲಕ್ಷ್ಮಿ, ಮನು, ಸೀತಮ್ಮ, ರತಿ ಅವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. 

ಭದ್ರತಾ ಬೇಲಿ ಅಳವಡಿಸಲು ಒತ್ತಾಯ: ಕರೆಯು ರಸ್ತೆಯ ಅಂಚಿನಲ್ಲಿದ್ದು, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಯಾವುದೇ ಸಂಭವಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕೆರೆಯ ಸುತ್ತ ಭದ್ರತಾ ಬೇಲಿ ಅಳವಡಿಸಬೇಕೆಂದು ಯಡೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರದ ಕೆರೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ (Lake) ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದ್ದು, ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ.

ಮೃತ ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ ವರ್ಷದ ಮತ್ತೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ. ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ