ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಕಾರು ಚಾಲಕ

Twitter
Facebook
LinkedIn
WhatsApp
ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಕಾರು ಚಾಲಕ

ಬೆಂಗಳೂರು, ಜ.24: ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್(Hit And Run) ಪ್ರಕರಣ ನಡೆದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರು (Bengaluru) ನಗರದ ಮಲ್ಲೇಶ್ವರಂ ಬಳಿ ನಡೆದಿದೆ. ಘಟನೆಯ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ. ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಕೊಂಡೊಯ್ಯವುದನ್ನು ವಿಡಿಯೋದಲ್ಲಿ ಕಾಣಬಹುದು. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದನ್ನು ನೋಡಬಹುದು.

ಬೆಂಗಳೂರು ನಗರದಲ್ಲಿ ಈ ಹಿಂದೆ ಅನೇಕ ಹಿಟ್​ ಆ್ಯಂಡ್ ರನ್​ ಪ್ರಕರಣಗಳು ನಡೆದಿವೆ. ಘಟನೆಯಲ್ಲಿ ಕೆಲವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲೂ ವ್ಯಕ್ತಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇಂತಹ ಹಿಟ್ ಆ್ಯಂಡ್ ರನ್​ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಮಹತ್ವದ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ. ಈ ಕಾಯ್ದೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಘಟನೆಯಲ್ಲಿ ಯಾರಾದರು ಮೃತಪಟ್ಟರೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸುವ ಅವಕಾಶ ಈಗಾಗಲೇ ಇದೆ. ಹೊಸ ಕಾಯ್ದೆಯಲ್ಲಿ 10 ವರ್ಷ ಜೈಲು ಶಿಕ್ಷೆ ಸೇರಿದಂತೆ 7 ಲಕ್ಷದವರೆಗೆ ದಂಡ ವಿಧಿಸುವ ಪ್ರಸ್ತಾಪ ಇದೆ.

ಈ ಹೊಸ ಕಾಯ್ದೆಯನ್ನು ಲಾರಿ ಚಾಲಕರು ವಿರೋಧಿಸಿದ್ದು, ಕಾಯ್ದೆ ಜಾರಿ ಖಂಡಿಸಿ ಇತ್ತೀಚೆಗೆ ದೇಶಾದ್ಯಂತ ಮುಷ್ಕರ ನಡೆಸಿದ್ದರು. ಲಾರಿ ಮಾಲೀಕರನ್ನಾಗಲೀ ಅಥವಾ ಈ ಉದ್ಯಮದಲ್ಲಿ ಇರುವ ಯಾರನ್ನೂ ಸಂಪರ್ಕಿಸದೇ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಅಂತಾ ಆಕ್ರೋಶ ಹೊರಹಾಕಿದ್ದರು.

ವಂಟಮೂರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಚಾರ್ಜ್​​ಶೀಟ್ ಸಲ್ಲಿಕೆಗೆ CID ಸಿದ್ಧತೆ, ಆರೋಪಿಗಳ ವಿರುದ್ಧವೇ ಮಗಳ ಹೇಳಿಕೆ

ಬೆಳಗಾವಿ, ಜ.24: ಜಿಲ್ಲೆಯ ನ್ಯೂ ವಂಟಮೂರಿ (New Vantamuri) ಗ್ರಾಮದಲ್ಲಿ ಡಿಸೆಂಬರ್ 11 ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸುತ್ತು. ಪ್ರಕರಣದ ತನಿಖೆ ಸಿಐಡಿಗೆ (CID) ಒಪ್ಪಿಸುವ ಒತ್ತಡ ಬಂದ ಹಿನ್ನೆಲೆ ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತಿಸಿತ್ತು. ಅದರಂತೆ, ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ಒಂದೂವರೆ ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ಚಾರ್ಜ್​ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಇದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಯುವತಿ ಹೇಳಿಕೆಯೇ ಬ್ರಹ್ಮಾಸ್ತ್ರವಾಗಿದೆ. ಹಲ್ಲೆ ನಡೆಸಿದ ಆರೋಪಿಗಳಾದ ತಂದೆ ಮತ್ತು ಚಿಕ್ಕಪ್ಪನ ವಿರುದ್ಧವೇ ಯುವತಿ ಹೇಳಿಕೆ ದಾಖಲಿಸಿದ್ದಾರೆ. ನಾನು ಪ್ರೀತಿ ಮಾಡಿಯೇ ಯುವಕನ ಜೊತೆ ಹೋಗಿದ್ದೇನೆ. ನಮ್ಮಪ್ಪ, ಚಿಕ್ಕಪ್ಪ ಸೇರಿ ಪ್ರಿಯಕರನ ಮನೆ ಧ್ವಂಸ ಮಾಡಿ ಹಲ್ಲೆ ಮಾಡುತ್ತಿರುವುದಾಗಿ ಕರೆಮಾಡಿ ಹೇಳಿದ್ದಾಗಿ ಹೇಳಿಕೆ ನೀಡಿದ್ದಾಳೆ. ಪ್ರಕರಣ ಸಂಬಂಧ ಒಟ್ಟು 1,500 ಸಾವಿರಕ್ಕೂ ಹೆಚ್ಚು ಪುಟಗಳ ಚಾರ್ಜ್​ಶೀಟ್​​ ಸಿದ್ಧಪಡಿಸಲಾಗಿದ್ದು, 40 ಜನರನ್ನ ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದ ಸಿಐಡಿ ತನಿಖಾ ತಂಡ 15 ದಿನಗಳ ಕಾಲ ಬೆಳಗಾವಿಯಲ್ಲಿ ಬೀಡು ಬಿಟ್ಟಿತ್ತು. ಸಂತ್ರಸ್ಥ ಮಹಿಳೆ ಹಾಗೂ ಸ್ಥಳೀಯ ವೃದ್ದೆಯೊಬ್ಬರು ಕೊಟ್ಟಿರುವ ಹೇಳಿಕೆಯೇ ಪ್ರಮುಖ ಸಾಕ್ಷ್ಯವನ್ನಾಗಿ ಮಾಡಲಾಗಿದೆ. ಆರೋಪಿಯ ಮಗಳ ಸುದೀರ್ಘ ಹೇಳಿಕೆಯನ್ನೂ ತನಿಖಾ ತಂಡ ದಾಖಲಿಸಿಕೊಂಡಿದೆ. ಇದರ ಜೊತೆಗೆ ಟೆಕ್ನಿಕಲ್ ಎವಿಡೆನ್ಸ್​ಗಳನ್ನ ಕೂಡ ಸಂಗ್ರಹಿಸಿದೆ. ಹೈಕೋರ್ಟ್ ಸೂಚನೆ ಹಿನ್ನೆಲೆ ಮೊಬೈಲ್ ದೃಶ್ಯದಲ್ಲಿ ಕಂಡುಬಂದವರನ್ನು ಕರೆಸಿ ವಿಚಾರಣೆ ನಡೆಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist