ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಂಜಾಬ್ ನಲ್ಲಿ 13 ಸ್ಥಾನಗಳಲ್ಲೂ ಆಪ್ ಸ್ಪರ್ಧೆ ; ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ...!

Twitter
Facebook
LinkedIn
WhatsApp
ಪಂಜಾಬ್ ನಲ್ಲಿ 13 ಸ್ಥಾನಗಳಲ್ಲೂ ಆಪ್ ಸ್ಪರ್ಧೆ ; ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ...!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ (West Bengal) ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ (Congress Party) ಎಂದು ತೃಣಮೂಲ ಕಾಂಗ್ರೆಸ್ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ (CM Mamata Banerjee) ಅವರು ಘೋಷಿಸಿದ ಬೆನ್ನಲ್ಲೇ, ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲೂ (Punjab) ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಭಗವಂತ್ ಮಾನ್ ಅವರು ಹೇಳಿದ್ದಾರೆ. ಇದರೊಂದಿಗೆ, ಇಂಡಿಯಾ ಕೂಟದ (India Bloc) ಪ್ರಮುಖ ಪಕ್ಷಗಳಾದ ಟಿಎಂಸಿ ಮತ್ತು ಆಪ್ ಎರಡೂ ಮೈತ್ರಿಯಿಂದ ಹೊರ ಬಿದ್ದಂತಾಗಿದೆ. ರಾಮ ಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ ಪಕ್ಷಕ್ಕೆ ಚುನಾವಣೆಯಲ್ಲಿ ಸೋಲಾಗಲಿದೆ ಎಂಬ ಕಾರಣಕ್ಕಾಗಿ ಪ್ರಾದೇಶಿಕ ಪಕ್ಷಗಳು ಮೈತ್ರಿ ಕೂಟದಿಂದ ದೂರು ಸರಿಯುತ್ತಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಪಂಜಾಬ್ ದೇಶದಲ್ಲಿ ಹೀರೋ ಆಗಲಿದೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಆಪ್ 13-0 ಅಂತರದಲ್ಲಿ ಪಂಜಾಬ್ ಗೆಲ್ಲಲಿದೆ. ನಾವು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಭಗವಂತ್ ಮಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದಕ್ಕೂ ಮೊದಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಅವರು ಘೋಷಣೆ ಮಾಡಿದ್ದರು. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ.

ದೇಶದಲ್ಲಿ ಏನು ಮಾಡಲಾಗುವುದು ಎಂಬುದರ ಬಗ್ಗೆ ನನಗೆ ಸಂಬಂಧಿಸಿದ್ದಲ್ಲ. ಆದರೆ ನಾವು ಜಾತ್ಯತೀತ ಪಕ್ಷವಾಗಿದ್ದೇವೆ ಮತ್ತು ಬಂಗಾಳದಲ್ಲಿ ನಾವೇ ಬಿಜೆಪಿಯನ್ನು ಸೋಲಿಸುತ್ತೇವೆ. ನಾವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದೇವೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 300 ಸ್ಥಾನಗಳ ಮೇಲೆ ಸ್ಪರ್ಧಿಸಲಿ. ಉಳಿದ ಸ್ಥಾನಗಳಲ್ಲಿ ಪ್ರಾದೇಶಿಕ ಪಕ್ಷಗಳು ಸೇರಿ ಸ್ಪರ್ಧೆ ಮಾಡಲಿ. ಹಾಗಿದ್ದೂ, ನಾವು ಕಾಂಗ್ರೆಸ್ ಪಕ್ಷದ ಯಾವುದೇ ಹಸ್ತಕ್ಷೇಪವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist