ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಡಿಯಲು ಹಣ ಕೊಟ್ಟಿಲ್ಲ ಎಂದು ಮಗನನ್ನೇ ಗುಂಡಿಕ್ಕಿ ಕೊಂದ ತಂದೆ...!

Twitter
Facebook
LinkedIn
WhatsApp
ಕುಡಿಯಲು ಹಣ ಕೊಟ್ಟಿಲ್ಲ ಎಂದು ಮಗನನ್ನೇ ಗುಂಡಿಕ್ಕಿ ಕೊಂದ ತಂದೆ...!

ಬೆಂಗಳೂರು: ವ್ಯಕ್ತಿಯೊಬ್ಬರು ತನ್ನ ಬೆಳೆದು ನಿಂತ ಮಗನನ್ನೇ ಗುಂಡು ಹಾರಿಸಿ ಕೊಲೆ (father Kills son) ಮಾಡಿ ಘಟನೆ ಗುರುವಾರ ರಾತ್ರಿ ಬೆಂಗಳೂರಿನಲ್ಲಿ (Bangalore News) ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯಲ್ಲಿ ವಾಸವಾಗಿರುವ ಸುರೇಶ್ ಎಂಬವರೇ ತಮ್ಮ ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದವರು (Man shoots down his own son). ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಈ ಕೊಲೆ (Murder Case) ನಡೆದಿದೆ.

ಕೊಡಗಿನ ಮೂಲದವರಾದ ನರ್ತನ್‌ ಬೋಪಣ್ಣ ಕರೇಕಲ್‌ನ ಮನೆಯಲ್ಲಿ ತಂದೆ ‌ ಸುರೇಶ್‌ ಮತ್ತು ತಾಯಿ ಜತೆ ವಾಸವಾಗಿದ್ದರು. ನರ್ತನ್‌ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಮನೆಯಲ್ಲಿ ತಾಯಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಸುರೇಶ್‌ಗೆ ಕುಡಿತದ ಹುಚ್ಚು ವಿಪರೀತವಾಗಿದ್ದು, ಇದೇ ಕಾರಣದಿಂದ ಅವರು ತಮ್ಮ ಮಗನನ್ನೇ ಕೊಲೆ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ಮನೆಯಲ್ಲೇ ಇರುತ್ತಿದ್ದ ಸುರೇಶ್‌ ಹೆಂಡತಿಯನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಸದಾ ಕಾಲ ಕುಡಿತದ ಗುಂಗಿನಲ್ಲೇ ಇರುತ್ತಿದ್ದ ಸುರೇಶ್‌ ಕುಡಿಯಲು ಹಣ ಬೇಕು ಎಂದು ಮಗನನ್ನು ಪೀಡಿಸುತ್ತಿದ್ದರು.

ಗುರುವಾರ ಸಂಜೆಯೂ ಕುಡಿತಕ್ಕೆ ಹಣ ಕೇಳಿ ವಿಪರೀತ ಹಿಂಸೆ ನೀಡಿದ್ದರು. ಹೊಡೆಯಲು ಬಂದಿದ್ದರು. ಇದನ್ನೆಲ್ಲ ನೋಡಿದ ನರ್ತನ್‌ ತನ್ನ ತಂದೆಯನ್ನು ಒಂದು ಕೋಣೆಯೊಳಗೆ ತಳ್ಳಿ ಬಾಗಿಲು ಹಾಕಿದ್ದರು. ಕೋಣೆಯ ಒಳಗಿನಿಂದಲೇ ಬೆದರಿಕೆ ಹಾಕುತ್ತಿದ್ದರು ಸುರೇಶ್‌.

ನೋಡೋಣ ಸ್ವಲ್ಪ ಹೊತ್ತು ಕಳೆದರೆ ಸರಿಯಾದೀತು ಎಂದು ನರ್ತನ್‌ ನಿರೀಕ್ಷಿಸಿದ್ದರು. ಅದಕ್ಕೆ ಪೂರಕವಾಗಿ ಸುರೇಶ್‌ ಒಳಗಿನಿಂದ ಸ್ವಲ್ಪ ತಣ್ಣಗಿದ್ದಂತೆ ಕಂಡಿತು. ಇತ್ತ ಒಳಗಿನಿಂದ ಸುರೇಶ್‌ ದೊಡ್ಡದೊಂದು ಕೃತ್ಯಕ್ಕೆ ಸಜ್ಜಾಗುತ್ತಿದ್ದರು. ಮಗ ತನ್ನನ್ನು ಕೋಣೆಯೊಳಗೆ ಹಾಡಿ ಹಾಕಿದ್ದರಿಂದ ಸಿಟ್ಟಿಗೆದ್ದ ಅವರು ತಮ್ಮ ಬಳಿ ಇದ್ದ ಲೈಸೆನ್ಸ್‌ ಹೊಂದಿದ ಸಿಂಗಲ್ ಬ್ಯಾರಲ್ ಗನ್ ಅನ್ನು ಹೊರಗೆ ತೆಗೆದು ನೇರವಾಗಿ ಗುಂಡು ಹೊಡೆದರು.

ನಿಜವೆಂದರೆ ಆ ಕೋಣೆಯ ಬಾಗಿಲು ಹಾಕಿತ್ತು. ಅದನ್ನು ಒಡೆಯಲೆಂದು ಅವರು ಬಾಗಿಲಿಗೆ ಗುಂಡು ಹಾರಿಸಿದರು. ಹಾಗೆ ಹಾರಿಸಿದ ಗುಂಡು ಬಾಗಿಲನ್ನು ಒಡೆದುದಲ್ಲದೆ ನೇರವಾಗಿ ಹೊರಗೆ ಕುಳಿತಿದ್ದ ನರ್ತನ್ ಬೋಪಣ್ಣ ಅವರ ತೊಡೆಯ ಮೇಲ್ಭಾಗಕ್ಕೆ ಹೊಕ್ಕಿದೆ.

ಮೂರು ಗಂಟೆ ನೆತ್ತರ ಮಗುವಲ್ಲೇ ಬಿದ್ದಿದ್ದ ನರ್ತನ್‌

ಹೀಗೆ ಗುಂಡು ಕಾಲನ್ನು ಹೊಕ್ಕುತ್ತಿದ್ದಂತೆಯೇ ನರ್ತನ್‌ ತನ್ನ ಸಹೋದರಿಗೆ ಕರೆ ಮಾಡಿ ತಂದೆ ನನ್ನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದ. ಸಹೋದರಿ ಸಂಬಂಧಿಕರೊಬ್ಬರನ್ನ ಮನೆ ಬಳಿ ಹೋಗುವಂತೆ ಹೇಳಿದ್ದರು. ಆದರೆ, ಅವರೆಲ್ಲ ಬಂದು ನೋಡಿದಾಗ ಸುಮಾರು ಮೂರು ಗಂಟೆ ಆಗಿತ್ತು. ಅಷ್ಟೂ ಹೊತ್ತು ರಕ್ತ ಬಸಿದುಹೋಗಿ ನಿತ್ರಾಣಗೊಂಡಿದ್ದ ನರ್ತನ್ ಏಳುವ ಸ್ಥಿತಿಯಲ್ಲೇ ಇರಲಿಲ್ಲ. ಆ ಬಳಿಕ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ.

ಇಷ್ಟೆಲ್ಲ ಆದರೂ ತಂದೆಯ ಕೋಪ ತಗ್ಗಿರಲಿಲ್ಲ. ಇತ್ತ ನರ್ತನ್‌ ತಾಯಿ ಹಾಸಿಗೆಯಲ್ಲೇ ಅಸಹಾಯಕರಾಗಿ ಬಿದ್ದುಕೊಂಡಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist