ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಠಡಿಯಲ್ಲಿ ಕಾಯಿಲ್ ಹೀಟರ್ ಹಾಕಿ ಮಲಗಿದ್ದ ಮೂವರು ಉಸಿರುಗಟ್ಟಿ ಸಾವು!

Twitter
Facebook
LinkedIn
WhatsApp
ಕೊಠಡಿಯಲ್ಲಿ ಕಾಯಿಲ್ ಹೀಟರ್ ಹಾಕಿ ಮಲಗಿದ್ದ ಮೂವರು ಉಸಿರುಗಟ್ಟಿ ಸಾವು!

ನೋಯ್ಡಾ, ಜ.26: ರಾತ್ರಿಯ ಚಳಿಯನ್ನು ನಿಗ್ರಹಿಸಲು ಬೆಡ್​ರೂಮ್​ನಲ್ಲಿ ಕಾಯಿಲ್ ಹೀಟರ್ ಹಾಕಿಕೊಂಡು ನಿದ್ರಿಸಿದ್ದ ತಂದೆ ಮತ್ತು ಮಗ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶ ರಾಜ್ಯದ ನೋಯ್ಡಾದ (Noida) ಸೆಕ್ಟರ್ -63 ರ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ಮಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಛಿಜಾರ್ಸಿ ಪ್ರದೇಶದಲ್ಲಿನ ಮನೆಯೊಂದರಲ್ಲಿ ಮೂವರು ತಮ್ಮ ಕೋಣೆಯಲ್ಲಿ ಕಾಯಿಲ್ ಹೀಟರ್ ಹಾಕಿಕೊಂಡು ಮಲಗಿದ್ದರು. ಈ ಹೀಟರ್​ನಿಂದ ಕಾರ್ಬನ್ ಮಾನಾಕ್ಸೈಡ್ ಹೊಗೆ ಬಿಡುಗಡೆಯಾಗಿ ಉಸಿರುಗಟ್ಟಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ ಮನೆಯವರಿಗೆ ಯಾವುದೇ ಚಟುವಟಿಕೆ ಕಂಡು ಬರದ ಹಿನ್ನೆಲೆ ನೆರೆಹೊರೆಯವರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿ, ಅವನ ಮಗ ಹಾಗೂ ಮಗಳು ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ನೀಡಿದ ನೆರೆಹೊರೆಯವು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಸಿದ್ದಾರೆ. ಆದರೆ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಯುವತಿಗೆ ಚಿಕಿತ್ಸೆ ಮುಂದುವರಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಚಳಿಗಾಲದಲ್ಲಿ ಕಾಯಿಲ್ ಹೀಟರ್ ಬಳಸದಂತೆ ವೈದ್ಯರು ಸಲಹೆ ನೀಡಿದ್ದಾರೆ. ಏಕೆಂದರೆ ಅದು ಇಂಗಾಲದ ಮಾನಾಕ್ಸೈಡ್ ಹೊರಸೂಸುವಿಕೆಯನ್ನು ಉಂಟುಮಾಡುತ್ತವೆ, ಅದು ಮಾರಕವಾಗಬಹುದು. ಅಂತಹ ಹೀಟರ್ ಅನ್ನು ಬಳಸಬೇಕಾದರೆ, ಕೋಣೆಯ ಕಿಟಕಿ ಬಾಗಿಲುಗಳನ್ನು ತೆರೆದಿಡುವಂತೆ ಸಲಹೆ ನೀಡಿದರು.

ಒಡಿಶಾದಲ್ಲಿ ಸರಣಿ ಅಪಘಾತ; ಮೂವರು ಸಾವು, 13 ಜನರಿಗೆ ಗಾಯ

ಭುವನೇಶ್ವರ್, ಜ.27: ಒಡಿಶಾದಲ್ಲಿ ಸರಣಿ ಅಪಘಾತ (Accident) ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ (Death). ಒಡಿಶಾದ ಕೊರಾಪುಟ್ ಜಿಲ್ಲೆಯ ಬೊರಿಗುಮ್ಮ ಪ್ರದೇಶದಲ್ಲಿ 2 ಬೈಕ್​​​​​​, ಒಂದು ಆಟೋರಿಕ್ಷಾ, ಒಂದು ಟ್ರ್ಯಾಕ್ಟರ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರು ಮಹಿಳೆಯರು (Woman) ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ (Injury) ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಪಟ್ನಾಯಕ್ ಅವರು ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

ಗಾಯಗೊಂಡ 13 ಜನರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕೋರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಗಾಯಾಳುಗಳನ್ನು ಬೋರಿಗುಮ್ಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವಿವರಗಳನ್ನು ನೀಡಿದ ಪೊಲೀಸರು, ಎರಡು ಬೈಕ್‌ಗಳು, ಒಂದು ಆಟೋರಿಕ್ಷಾ, ಒಂದು ಟ್ರ್ಯಾಕ್ಟರ್ ಮತ್ತು ಒಂದು ಎಸ್‌ಯುವಿ ನಡುವೆ ಸರಣಿ ಅಪಘಾತ ಸಂಭವಿಸಿ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಸ್‌ಯುವಿ ಮತ್ತು ಆಟೋ ರಿಕ್ಷಾ ಒಂದೇ ಕಡೆಯಿಂದ ಬರುತ್ತಿದ್ದದ್ದು ಕಂಡು ಬಂದಿದೆ. ವಿರುದ್ಧ ದಿಕ್ಕಿನಿಂದ ಟ್ರ್ಯಾಕ್ಟರ್ ಬಂದಿದೆ. ಎಸ್‌ಯುವಿ ಅತಿವೇಗದಲ್ಲಿ ಚಲಿಸುತ್ತಿದ್ದು, ಆಟೋ ರಿಕ್ಷಾವನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿತ್ತು. ಅದೇ ಸಮಯದಲ್ಲಿ, ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಬೈಕ್ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist