ವೇಣೂರು :ಗೋಳಿಯಂಗಡಿಯಲ್ಲಿನ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ.!
ಬೆಳ್ತಂಗಡಿ 29: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್ ಮೇಲೆ ಎಫ್ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಭಾನುವರ 5.15ರ ಸುಮಾರಿಗೆ ಈ ದುರಂತ ನಡೆದಿದ್ದು, ಕೇರಳದವರಾದ ಸ್ವಾಮಿ (55), ವರ್ಗೀಸ್ (68), ಹಾಸದ ಅರಸೀಕೆರೆ ಮೂಲದ ಚೇತನ್ (25) ಎಂಬ ಮೂವರು ಮೃತರಾಗಿದ್ದು, ಘಟನೆ ನಡೆದ ಬಳಿಕ ಉಳಿದ ಕಾರ್ಮಿಕರು, ಮಾಲೀಕ ಪರಾರಿಯಾಗಿದ್ದರು.
ಕಾರ್ಕಳ ಹೆಬ್ರಿಯಲ್ಲಿ ಸರಕಾರಿ ಬಸ್ಗೆ ಕಾರು ಡಿಕ್ಕಿ, ಮಹಿಳೆ ಮೃತ್ಯು..!
ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ.
ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಇನೋವಾ ಕಾರು ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಹಿಂದಿಕ್ಕುವಾಗ ರಿಕ್ಷಾದ ಬಲಬಾಗಕ್ಕೆ ಡಿಕ್ಕಿ ಹೊಡೆದು ತನ್ನ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ (77) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.