ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ CAA ಜಾರಿಗೆ ಬರಲಿದೆ, ಇದು ನನ್ನ ಗ್ಯಾರಂಟಿ; ಕೇಂದ್ರ ಸಚಿವ ಶಾಂತನು ಠಾಕೂರ್

Twitter
Facebook
LinkedIn
WhatsApp
ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ CAA ಜಾರಿಗೆ ಬರಲಿದೆ, ಇದು ನನ್ನ ಗ್ಯಾರಂಟಿ; ಕೇಂದ್ರ ಸಚಿವ ಶಾಂತನು ಠಾಕೂರ್

ಕೊಲ್ಕತ್ತಾ ಜನವರಿ 29: ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ (Shantanu Thakur) ಹೇಳಿದ್ದಾರೆ. ಭಾನುವಾರ ಪಶ್ಚಿಮ ಬಂಗಾಳದ (West Bengal) ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಂಗಾಂವ್‌ನ ಬಿಜೆಪಿಯ ಲೋಕಸಭಾ ಸಂಸದ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಮುಂದಿನ ಏಳು ದಿನಗಳಲ್ಲಿ ದೇಶಾದ್ಯಂತ ಸಿಎಎ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎ ಒಂದು ವಾರದೊಳಗೆ ಜಾರಿಗೆ ಬರಲಿದೆ ಎಂದಿದ್ದಾರೆ.

ನರೇಂದ್ರ ಮೋದಿ ಸರ್ಕಾರ ತಂದ ವಿವಾದಾತ್ಮಕ ಸಿಎಎ ಅಡಿಯಲ್ಲಿ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್‌31, 2014ವರೆಗೆ ಭಾರತಕ್ಕೆ ಬಂದಿರುವ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡಲಾಗುವುದು.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ ಅಂಗೀಕರಿಸಿ, ರಾಷ್ಟ್ರಪತಿ ಅಂಕಿತ ಹಾಕಿದ ನಂತರ ದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಕಳೆದ ವರ್ಷ ಡಿಸೆಂಬರ್ 27 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಇದು ದೇಶದ ಕಾನೂನು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾ ಆರೋಪಿಸಿದ್ದರು.

ಕೋಲ್ಕತ್ತಾದಲ್ಲಿ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಿಎಎ ಜಾರಿಗೊಳಿಸುವುದು ಬಿಜೆಪಿಯ ಬದ್ಧತೆಯಾಗಿದೆ ಎಂದು ಹೇಳಿದರು. ಅಂದಹಾಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸಿಎಎಯನ್ನು ವಿರೋಧಿಸುತ್ತಿದೆ.

ವಿವಾದಾತ್ಮಕ ಸಿಎಎ ಜಾರಿಗೆ ತರುವ ಭರವಸೆಯು ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಯೋಜನೆಯಾಗಿತ್ತು. ಇದು ರಾಜ್ಯದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ತೋರಿಕೆಯ ಅಂಶ ಎಂದು ಬಿಜೆಪಿ ನಾಯಕರು ಪರಿಗಣಿಸಿದ್ದಾರೆ.

ಸಂಸದೀಯ ಕಾರ್ಯವಿಧಾನಗಳ ಕೈಪಿಡಿಯ ಪ್ರಕಾರ, ಯಾವುದೇ ಶಾಸನದ ನಿಯಮಗಳನ್ನು ರಾಷ್ಟ್ರಪತಿಗಳ ಒಪ್ಪಿಗೆಯ ಆರು ತಿಂಗಳೊಳಗೆ ರಚಿಸಬೇಕು ಅಥವಾ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಧೀನ ಶಾಸನಗಳ ಸಮಿತಿಗಳಿಂದ ವಿಸ್ತರಣೆಯನ್ನು ಕೋರಬೇಕು.

2020 ರಿಂದ ಗೃಹ ಸಚಿವಾಲಯವು ನಿಯಮಗಳ ರಚನೆಗಾಗಿ ಸಂಸದೀಯ ಸಮಿತಿಗಳಿಂದ ನಿಯಮಿತ ಮಧ್ಯಂತರಗಳಲ್ಲಿ ವಿಸ್ತರಣೆಗಳನ್ನು ತೆಗೆದುಕೊಳ್ಳುತ್ತಿದೆ. ಸಂಸತ್ ಕಾನೂನನ್ನು ಅಂಗೀಕರಿಸಿದ ನಂತರ ಪ್ರತಿಭಟನೆಗಳು ನಡೆದಿದ್ದು, ಪ್ರತಿಭಟನೆಗಳನ್ನು ಹತ್ತಿಕ್ಕುವ ಪೊಲೀಸ್ ಕ್ರಮದ ಸಮಯದಲ್ಲಿ ನೂರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು.

ಏತನ್ಮಧ್ಯೆ, ಕಳೆದ ಎರಡು ವರ್ಷಗಳಲ್ಲಿ, 1955ರಪೌರತ್ವ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ ಅಧಿಕಾರವನ್ನು ಒಂಬತ್ತು ರಾಜ್ಯಗಳ 30 ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ನೀಡಲಾಗಿದೆ.

2021-22 ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಏಪ್ರಿಲ್ 1, 2021 ರಿಂದ ಡಿಸೆಂಬರ್ 31, 2021 ರವರೆಗೆ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಭಾರತೀಯರನ್ನು ನೀಡಲಾಗಿದೆ. ಅಂದಹಾಗೆ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾಗಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಯಾವುದೇ ಜಿಲ್ಲೆಗಳ ಅಧಿಕಾರಿಗಳಿಗೆ ಇದುವರೆಗೆ ಅಧಿಕಾರ ನೀಡಲಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist